ಮಂಗಳೂರು: ಕಟೀಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆ.6ರಂದು ಕೆನರಾ ಬ್ಯಾಂಕ್ ಇ-ಹುಂಡಿಯನ್ನು (E Hundi) ಅಳವಡಿಸಿದೆ.

ಕೆನರಾ ಬ್ಯಾಂಕ್‌ನ ಮಂಗಳೂರು ವಲಯ ಮುಖ್ಯಸ್ಥರಾದ ಮಂಜುನಾಥ್ ಬಿ. ಸಿಂಗೈ ಅವರ ಸಮ್ಮುಖದಲ್ಲಿ, ದೇವಳದ ಆನುವಂಶಿಕ ಮೊಕ್ತೇಸರರಾದ ಸನತ್ ಕುಮಾರ್ ಶೆಟ್ಟಿ ಮತ್ತು ಹರಿನಾರಾಯಣದಾಸ ಅಸ್ರಣ್ಣ ಅವರು ಉದ್ಘಾಟಿಸಿದರು.
ಈ ಇ-ಹುಂಡಿ ಸೌಲಭ್ಯವು ಭಕ್ತರಿಗೆ ಡಿಜಿಟಲ್ ರೂಪದಲ್ಲಿ ಕಾಣಿಕೆ ಸಲ್ಲಿಸಲು ಸಹಾಯ ಮಾಡುತ್ತದೆ.
ಈ ಭಾಗದ ದೇವಾಲಯ/ಸಂಸ್ಥೆಗಳಲ್ಲಿ ಕೆನರಾ ಬ್ಯಾಂಕ್ ಅಳವಡಿಸಿರುವ ಆರನೇ ಇ-ಹುಂಡಿ ಇದಾಗಿದೆ. ಈ ಸಂದರ್ಭದಲ್ಲಿ ಬ್ಯಾಂಕಿನ ಉಪ ಮಹಾಪ್ರಬಂಧಕರುಗಳಾದ ಲತಾ ಕುರುಪ್ ಮತ್ತು ಎಲ್. ಆರ್. ವಿಜಯಶ್ರೀ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

