• Home  
  • ಪತಿ ಮುಂದೆಯೇ ಸಾಮೂಹಿಕ ಅ*ತ್ಯಾಚಾರ ಪ್ರಕರಣ: 8 ಮಂದಿಗೆ ಜೀವಾವಧಿ ಶಿಕ್ಷೆ
- HOME - LATEST NEWS - NATIONAL

ಪತಿ ಮುಂದೆಯೇ ಸಾಮೂಹಿಕ ಅ*ತ್ಯಾಚಾರ ಪ್ರಕರಣ: 8 ಮಂದಿಗೆ ಜೀವಾವಧಿ ಶಿಕ್ಷೆ

ಮಧ್ಯಪ್ರದೇಶ: ನವವಿವಾಹಿತೆಯನ್ನು ಆಕೆಯ ಪತಿಯೊಂದಿಗೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ 8 ಅಪರಾಧಿಗಳಿಗೆ ಮಧ್ಯಪ್ರದೇಶದ ರೇವಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ ತಲಾ ₹2,30,000 ದಂಡ ಹಾಕಿದೆ.

ನಾಲ್ಕನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಪದ್ಮಾ ಜಾಧವ್ ಅವರು ಎಂಟು ಆರೋಪಿಗಳಾದ ರಾಮಕಿಶನ್, ಗರುಡ್ ಕೋರಿ, ರಾಕೇಶ್ ಗುಪ್ತಾ, ಸುಶೀಲ್ ಕೋರಿ, ರಜನೀಶ್ ಕೋರಿ, ದೀಪಕ್ ಕೋರಿ, ರಾಜೇಂದ್ರ ಕೋರಿ ಮತ್ತು ಲವ್‌ಕುಶ್ ಕೋರಿ ಅವರನ್ನು ತಪ್ಪಿತಸ್ಥರೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

2024ರ ಅಕ್ಟೋಬರ್ 21ರಂದು ದೇವಸ್ಥಾನಕ್ಕೆ ತೆರಳಿದ್ದ ನವ ದಂಪತಿಯನ್ನು ಅಪಹರಿಸಿದ್ದರು. ನಂತರ ಅವರಲ್ಲಿ ಆರು ಮಂದಿ ಅಪರಾಧಿಗಳು ಮಹಿಳೆಯ ಪತಿಯ ಮುಂದೆಯೇ ಸರದಿಯಂತೆ ಒಬ್ಬರ ನಂತರ ಒಬ್ಬರಂತೆ ಅತ್ಯಾಚಾರ ಮಾಡಿದ್ದರು. ಈ ವೇಳೆ ಅವರು ಮದ್ಯ ಸೇವಿಸಿದ್ದರು ಎಂದು ಪ್ರಾಸಿಕ್ಯೂಷನ್‌ ತಿಳಿಸಿತ್ತು.

ಉಳಿದ ಇಬ್ಬರು ಆರೋಪಿಗಳು ಅದಕ್ಕೆ ಸಹಕಾರ ನೀಡಿದ್ದರು. ಅಪರಾಧಿಗಳನ್ನು ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 70 (ಸಾಮೂಹಿಕ ಅತ್ಯಾಚಾರ) ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷೆ ವಿಧಿಸಲಾಗಿದೆ.

ಅವರಲ್ಲಿ ಆರು ಮಂದಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದರೆ, ಇತರ ಇಬ್ಬರು ಅಪರಾಧ ಎಸಗಲು ಅವರಿಗೆ ಸಹಾಯ ಮಾಡಿದ್ದರು ಎಂದು ವರದಿ ತಿಳಿಸಿದೆ. ಸಂತ್ರಸ್ತರು 19 ರಿಂದ 20 ವರ್ಷ ವಯಸ್ಸಿನವರಾಗಿದ್ದು, ಘಟನೆಯ ಸಮಯದಲ್ಲಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Share News

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678