ಬೆಂಗಳೂರು: ರಾಜ್ಯದಲ್ಲಿ ವಿವಿಧ ಮಾದರಿಯ ವಾಹನಗಳ ವಾಯುಮಾಲಿನ್ಯ ಪರೀಕ್ಷಾ ಶುಲ್ಕವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದೆ.

ಮಾಲಿನ್ಯ ಪರೀಕ್ಷಾ ಕೇಂದ್ರಗಳ ನಿರ್ವಾಹಕರು ಕಾರ್ಯಾಚರಣೆ ವೆಚ್ಚ ಹೆಚ್ಚಿರುವುದನ್ನು ಉಲ್ಲೇಖಿಸಿ ಶುಲ್ಕ ಪರಿಷ್ಕರಣೆಗೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಆ.13ರಂದು ಹೊಸ ದರಗಳ ಅಧಿಸೂಚನೆ ಹೊರಡಿಸಿದೆ. ಇದಕ್ಕೂ ಮೊದಲು ಕೊನೇ ಬಾರಿ ಏಪ್ರಿಲ್ 2022ರಲ್ಲಿ ಶುಲ್ಕ ಪರಿಷ್ಕರಿಸಲಾಗಿತ್ತು.
| ಯಾವ ವಾಹನಕ್ಕೆ ಎಷ್ಟು ಹೆಚ್ಚಳ? | ||
| ವಾಹನ | ಹಳೆ ಶುಲ್ಕ | ಹೊಸ ಶುಲ್ಕ |
| ದ್ವಿಚಕ್ರ | 65 | 80 |
| ತ್ರಿಚಕ್ರ | 75 | 80 |
| ನಾಲ್ಕು ಚಕ್ರದ ವಾಹನ | 115 | 150 |
| ಎಲ್ಲಾ ಡೀಸೆಲ್ ವಾಹನ | 160 | 200 |
