ಮಂಗಳೂರು : ಅಗಸ್ಟ್ 10 : ಪಾದುವಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೆಜ್ಮೆಂಟ್‌ನಲ್ಲಿ ಮೊದಲ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸುವ ‘ಯುಫೋರಿಯ’ – ಫ್ರೆಶರ್ಸ್ ದಿನಾಚರಣೆಯನ್ನು ಇತ್ತೀಚೆಗೆ ಅತ್ಯಂತ ಸಡಗರದಿಂದ ಆಚರಿಸಲಾಯಿತು.


ಹೊಸ ವಿದ್ಯಾರ್ಥಿ ಗಳನ್ನುದ್ದೇಶಿಸಿ ಮಾತನಾಡಿದ ಅವರು, “ವಿದ್ಯಾರ್ಥಿಗಳು ಭಾಷಾ ಪಕ್ವತೆ, ಪಠ್ಯ ವಿಷಯಗಳನ್ನು ತಿಳಿಯುವ ಕುತೂಹಲ ಹಾಗೂ ಎಲ್ಲಾ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ವಿಶಿಷ್ಟವಾಗಿ ಬೆಳೆಯಬೇಕು. ನಾನು ಕೂಡ ಇದೇ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಇಂದು ದೇಶ-ವಿದೇಶಗಳಲ್ಲಿ ಸಂಸ್ಥೆಯ ಹೆಸರನ್ನು ಪ್ರತಿನಿಧಿಸುತ್ತಿರುವುದಕ್ಕೆ ಹೆಮ್ಮೆಯಿದೆ” ಎಂದು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರು ಹಾಗೂ ಪಾದುವಾ ಸಮೂಹ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್ ಡೈರೆಕ್ಟರ್ ಆಗಿರುವ ವಂದನೀಯ ಗುರು ಅರುಣ್ ವಿಲ್ಸನ್ ಲೋಬೋ ವಹಿಸಿದ್ದರು. ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಕಾಲೇಜಿನ ಯಶಸ್ಸಿನ ಇತಿಹಾಸವನ್ನು ಸ್ಮರಿಸಿದ ಅವರು, “ಕಾಲೇಜು ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವ ವಿಕಸನಕ್ಕೆ ಒತ್ತು ನೀಡಬೇಕು. ಆ ಮೂಲಕ ದೇಶದ ಒಬ್ಬ ಜವಾಬ್ದಾರಿಯುತ ಉತ್ತಮ ನಾಗರೀಕನಾಗಿ ಬೆಳೆಯಬೇಕು” ಎಂದು ಕರೆ ನೀಡಿ, ಹೊಸ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಪಾದುವಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರೋಶನ್ ವಿನ್ಸಿ ಸಾಂತುಮಯೋರ್ ಉಪಸ್ಥಿತರಿದ್ದರು. ಬಿಕಾಂ ವಿಭಾಗದ ಮುಖ್ಯಸ್ಥರಾದ ಪ್ರಾಧ್ಯಾಪಕಿ ಝೀನಾ ಕೊರ್ನೆಲಿಯೊ ಹಾಗೂ ಬಿಸಿಎ ವಿಭಾಗದ ಮುಖ್ಯಸ್ಥರಾದ ಪ್ರಾಧ್ಯಾಪಕಿ ಜೆಸ್ಲಿನ್ ಡಿಸೋಜ ಉಪಸ್ಥಿತರಿದ್ದರು. ಭಾಷಾ ವಿಭಾಗದ ಪ್ರಾಧ್ಯಾಪಕಿ ರೇಶ್ಮಾ ಡಿಸೋಜ ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಕರು ಹಾಗೂ ಬಿಬಿಎ ವಿಭಾಗದ ಮುಖ್ಯಸ್ಥರಾದ ಪ್ರಾಧ್ಯಾಪಕಿ ಸೀಮಾ ಪಿರೇರಾ ವಂದನಾರ್ಪಣೆ ನೆರವೇರಿಸಿದರು. ಮೊದಲ ವರ್ಷದ ವಿದ್ಯಾರ್ಥಿನಿಯರಾದ ಇಂಚರ ಹಾಗೂ ನೇತ್ರಾವತಿ ಕಾರ್ಯಕ್ರಮ ನಿರ್ವಹಿಸಿದರು. ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ ಮೊದಲ ವರ್ಷದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.











