ಮಂಗಳೂರು: ಭಾರೀ ಮಳೆ ಹಿನ್ನೆಲೆ ದ.ಕ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗುತ್ತದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಮೇರೆಗೆ ಜಿಲ್ಲೆಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲೆಯ ಜಿಲ್ಲಾಧಿಕಾರಿ ವಾರ್ತಾ ಇಲಾಖೆಯ ಮೂಲಕ ರಜೆ ಘೋಷಿಸುತ್ತಿದ್ದಾರೆ. ಆದರೆ ಕೆಲವೊಂದು ಕಿಡಿಗೇಡಿಗಳು ಈ ಹಿಂದಿನ ಆದೇಶವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿ ಪೋಷಕರು ಹಾಗೂ ಮಕ್ಕಳಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ಈ ಹಿನ್ನೆಲೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದ್ದು,
ಭಾರೀ ಮಳೆ ಸಾಧ್ಯತೆ: ಆ.3 ರಂದು ಮಂಗಳೂರು & ಪುತ್ತೂರು ಉಪವಿಭಾಗದ ಶಾಲಾ-ಕಾಲೇಜುಗಳಿಗೆ ರಜೆ
ವಿಪತ್ತು ಅಥವಾ ರಜೆಯ ಬಗ್ಗೆ ಗೊಂದಲ ಮೂಡಿಸಿದರೆ ವಿಪತ್ತು ಅಥವಾ ಅದರ ತೀವ್ರತೆ ಅಥವಾ ವ್ಯಾಪ್ತಿಯ ಬಗ್ಗೆ ಸುಳ್ಳು ಮಾಹಿತಿಯನ್ನು ನೀಡಿ ಅಥವಾ ಹರಡಿ ಭಯಭೀತಿಯನ್ನು ಉಂಟುಮಾಡುವ ವ್ಯಕ್ತಿಯು, ತಪ್ಪಿತಸ್ಥರೆಂದು ಸಾಬೀತಾದಲ್ಲಿ, ಒಂದು ವರ್ಷದವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಅಥವಾ ದಂಡದ ಶಿಕ್ಷೆಗೆ ಗುರಿಯಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ. ಆದ್ದರಿಂದ ರಜೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರುವ ಪ್ರತಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿ, ಜೊತೆಗೆ ರಜೆಯ ಆದೇಶವನ್ನು ಹಂಚುವ ಮುನ್ನವೂ ಎಚ್ಚರಿಕೆ ವಹಿಸಿ ಎಂದು ಜಿಲ್ಲಾಡಳಿತ ತಿಳಿಸಿದೆ.

