DAKSHINA KANNADAHOMELATEST NEWS

ಇಸ್ರೇಲ್-ಇರಾನ್ ಸಂಘರ್ಷ: ಮಂಗಳೂರು ವಿಮಾನ ಹಾರಾಟದಲ್ಲಿ ವ್ಯತ್ಯಯ

ಮಂಗಳೂರು: ಇಸ್ರೇಲ್ ಇರಾನ್ ಸಂಘರ್ಷದ ಹಿನ್ನೆಲೆ ಮಂಗಳೂರು ವಿಮಾನ ನಿಲ್ದಾಣದಿಂದ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿದೆ. ನಿಗದಿಯಾಗಿದ್ದ ಏರ್‌ ಇಂಡಿಯಾ, ಇಂಡಿಗೋ ವಿಮಾನಗಳ ಹಾರಾಟವನ್ನ ಹಠಾತ್‌ ರದ್ದುಗೊಳಿಸಲಾಗಿದೆ.

ಪ್ರಮುಖವಾಗಿ ದುಬೈಗೆ ತೆರಳುವ ವಿಮಾನಗಳ ಹಾರಾಟ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ವಿದೇಶಕ್ಕೆ ಪ್ರಯಾಣ ಮಾಡುವ ಪ್ರಯಾಣಿಕರು ಆಯಾ ವಿಮಾನ ಸಂಸ್ಥೆಗಳು ಖಚಿತಪಡಿಸಿದ ಬಳಿಕವಷ್ಟೇ ವಿಮಾನ ನಿಲ್ದಾಣಕ್ಕೆ ಆಗಮಿಸಿ ಎಂದು ವಿಮಾನ ನಿಲ್ದಾಣ ಪ್ರಾಧಿಕಾರಿಗಳು ಮನವಿ ಮಾಡಿವೆ.

ಮಂಗಳೂರು ಏರ್‌ಪೋರ್ಟ್‌ನಿಂದ ರದ್ದಾದ ವಿಮಾನಗಳು

9.25 ರ ಮಂಗಳೂರು – ಮಸ್ಕತ್ ಏರ್ ಇಂಡಿಯಾ ಎಕ್ಸ್‌ಪ್ರೆಸ್‌
ಮಧ್ಯಾಹ್ನ 1.20 ರ ಮಂಗಳೂರು – ದುಬೈ ಏರ್ ಇಂಡಿಯಾ ಎಕ್ಸ್‌ಪ್ರೆಸ್‌
ರಾತ್ರಿ 7.15ರ ಮಂಗಳೂರು – ದುಬೈ ಇಂಡಿಗೊ
ರಾತ್ರಿ 8.15ರ ಮಂಗಳೂರು – ದುಬೈ ಏರ್ ಇಂಡಿಯಾ ಎಕ್ಸ್‌ಪ್ರೆಸ್‌
ರಾತ್ರಿ 8.55ರ ಮಂಗಳೂರು – ಬಹರೇನ್ ಏರ್ ಇಂಡಿಯಾ ಎಕ್ಸ್‌ಪ್ರೆಸ್‌
ರಾತ್ರಿ 9.05ರ ಮಂಗಳೂರು – ಅಬುಧಾಬಿ ಇಂಡಿಗೊ

ಇರಾನ್‌ ವಾಯು ಮಾರ್ಗದಲ್ಲಿ ವಿಮಾನ ಹಾರಾಟ ನಿಷೇಧ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗಿದೆ. ಗಲ್ಪ್‌ ರಾಷ್ಟ್ರಗಳಿಗೆ ತೆರಳುವ ಎಲ್ಲ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದೆ.

Share News