• Home  
  • *ಕಾಂಗ್ರೆಸ್ ಹಿರಿಯ ನಾಯಕರ ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಬೇಟಿ*
- DAKSHINA KANNADA - HOME

*ಕಾಂಗ್ರೆಸ್ ಹಿರಿಯ ನಾಯಕರ ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಬೇಟಿ*

ಬಂಟ್ವಾಳ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಕೇಂದ್ರದ ಮಾಜಿ ಸಚಿವರಾದ ಬಿ ಜನಾರ್ದನ ಪೂಜಾರಿಯವರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಹಾಗೂ ಮಾಜಿ ಕೇಂದ್ರ ಸಚಿವರಾದ ಎಂ.ವೀರಪ್ಪ ಮೊಯ್ಲಿ ಭೇಟಿ ಬಂಟ್ವಾಳದ ಪೂಜಾರಿಯವರ ನಿವಾಸದಲ್ಲಿ ನಡೆಯಿತು. ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರದ ಸಚಿವರಾಗಿ ಹಲವು ಜವಾಬ್ದಾರಿಗಳನ್ನು ನಿಭಾಯಿಸಿದ್ದ ಮೊಯ್ಲಿ ಹಾಗೂ ಕೇಂದ್ರದ ಪ್ರಭಾವಿ ಸಚಿವರಾಗಿ ಜನಪ್ರಿಯರಾಗಿದ್ದ ಜನಾರ್ದನ ಪೂಜಾರಿ ಪ್ರಭಾವಿ ನಾಯಕರಾಗಿದ್ದವರು. ಭಾನುವಾರ ಅಪರಾಹ್ನ ಮೊಯ್ಲಿ ಅವರು ಪೂಜಾರಿ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಬಳಿಕ ಉಭಯ ನಾಯಕರು […]

Share News

ಬಂಟ್ವಾಳ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಕೇಂದ್ರದ ಮಾಜಿ ಸಚಿವರಾದ ಬಿ ಜನಾರ್ದನ ಪೂಜಾರಿಯವರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಹಾಗೂ ಮಾಜಿ ಕೇಂದ್ರ ಸಚಿವರಾದ ಎಂ.ವೀರಪ್ಪ ಮೊಯ್ಲಿ ಭೇಟಿ

ಬಂಟ್ವಾಳದ ಪೂಜಾರಿಯವರ ನಿವಾಸದಲ್ಲಿ ನಡೆಯಿತು. ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರದ ಸಚಿವರಾಗಿ ಹಲವು ಜವಾಬ್ದಾರಿಗಳನ್ನು ನಿಭಾಯಿಸಿದ್ದ ಮೊಯ್ಲಿ ಹಾಗೂ ಕೇಂದ್ರದ ಪ್ರಭಾವಿ ಸಚಿವರಾಗಿ ಜನಪ್ರಿಯರಾಗಿದ್ದ ಜನಾರ್ದನ ಪೂಜಾರಿ ಪ್ರಭಾವಿ ನಾಯಕರಾಗಿದ್ದವರು. ಭಾನುವಾರ ಅಪರಾಹ್ನ ಮೊಯ್ಲಿ ಅವರು ಪೂಜಾರಿ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಬಳಿಕ ಉಭಯ ನಾಯಕರು ಹಿಂದಿನ ರಾಜಕೀಯ ಸನ್ನಿವೇಶವನ್ನು ಮೆಲುಕು ಹಾಕಿ ಉಭಯಕುಶಲೋಪರಿ ನಡೆಸಿದರು.

ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ ಮಂಗಳೂರಿನ ಮಾಜಿ ಮೇಯರ್ ಗಳಾದ ಶಶಿಧರ ಹೆಗ್ಡೆ ಭಾಸ್ಕರ ಕೆ, ಮಂಗಳೂರಿನ ಮಾಜಿ ಕಾರ್ಪೊರೇಟರ್ ಅಶೋಕ್ ಡಿ.ಕೆ, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್, ರಿಸರ್ವ್ ಬ್ಯಾಂಕ್ ಮಾಜಿ ನಿರ್ದೇಶಕ ನವೀನ್ ಭಂಡಾರಿ ಉಪಸ್ಥಿತರಿದ್ದರು.

Share News