ಬಂಟ್ವಾಳ : “ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆತಾಗ ಮಾತ್ರ ಒಂದು ಉತ್ತಮ ಸಮಾಜವನ್ನು ಕಟ್ಟಲು ಸಾಧ್ಯ. ಸರಕಾರಿ ಶಾಲೆಗಳನ್ನು ಉಳಿಸಿ, ಬೆಳೆಸಲು ಪ್ರತಿಯೊಬ್ಬ ನಾಗರಿಕರೂ ಕೈಜೋಡಿಸಬೇಕು” ಎಂದು ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರು ಕರೆ ನೀಡಿದ್ದಾರೆ.


ಸರಕಾರಿ ಶಾಲೆಗಳ ಬಲವರ್ಧನೆಗೆ ಸಾರ್ವಜನಿಕರ ಸಹಕಾರ ಅತ್ಯಂತ ಅಗತ್ಯವಾಗಿದೆ ಎಂದು ಈ ಸಂದರ್ಭದಲ್ಲಿ ಅವರು ನೆನಪಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್‌ಪುಸ್ತಕ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.






