ಗುರುಪುರ: ಫ್ರೆಂಡ್ಸ್ ಸರ್ಕಲ್ ಕೆಳಗಿನಕೆರೆ (ರಿ.) ಅಡ್ಡೂರು ಮತ್ತು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ.), ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಇವುಗಳ ಜಂಟಿ ಆಶ್ರಯದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವು ರವಿವಾರ ಅಡ್ಡೂರಿನ ಸರ್ಕಾರಿ ಶಾಲೆಯಲ್ಲಿ ಯಶಸ್ವಿಯಾಗಿ ಜರುಗಿತು.
ಅಡ್ಡೂರು ಬದ್ರಿಯಾ ಜುಮಾ ಮಸೀದಿ ಖತೀಬ್ ಸದಖತುಲ್ಲಾ ಫೈಝಿ ಅವರು ದುಆ ನೆರವೇರಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಮಾನವನ ಜೀವ ಉಳಿಸುವ ರಕ್ತದಾನವು ಮಹಾದಾನವಾಗಿದೆ. ಇದಕ್ಕಿಂತ ಮಿಗಿಲಾದ ಸೇವೆ ಇನ್ನೊಂದಿಲ್ಲ. ಯುವ ಸಮೂಹ ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಮಾನವ ಕುಲದ ಸಂರಕ್ಷಣೆಯಲ್ಲಿ ಮುಖ್ಯ ಪಾತ್ರವಹಿಸಬೇಕು,” ಎಂದು ಕರೆ ನೀಡಿದರು.
ಈ ಶಿಬಿರದಲ್ಲಿ ಒಟ್ಟು 82 ಮಂದಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. ಇದೇ ಸಂದರ್ಭದಲ್ಲಿ ಸಮಾಜ ಸೇವೆಯಲ್ಲಿ ಸಕ್ರಿಯರಾ ಗಿರುವ ಬ್ಲಡ್ ಹೆಲ್ಪ್ ಲೈನ್ ಕಾರ್ಯನಿರ್ವಾಹಕ ನಿಝಾಮ್ ತೋಕೂರು ಹಾಗೂ ರಿಫಾ ಕ್ಲಿನಿಕ್ ಸಹಾಯಕ ಸಿಬ್ಬಂದಿ ಅಬ್ದುಲ್ ರೆಹ್ಮಾನ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ವೇದಿಕೆಯಲ್ಲಿ ಕೆಎಂಸಿ ವೈದ್ಯೆ ಡಾ. ಋತ್ವಿ, ಡಾ. ಇ.ಕೆ. ಸಿದ್ದೀಕ್, ಬಿಜೆಎಂ ಅಧ್ಯಕ್ಷ ಅಹ್ಮದ್ ಬಾವ ಅಂಗಡಿಮನೆ, ಜಿ.ಪಂ. ಮಾಜಿ ಸದಸ್ಯ ಯು.ಪಿ. ಇಬ್ರಾಹೀಂ, ಗುರುಪುರ ಗ್ರಾ.ಪಂ. ಸದಸ್ಯರಾದ ಎ.ಕೆ. ಅಶ್ರಫ್ ಮತ್ತು ಸಾಹಿಕ್ ಪಾಂಡೇಲ್ ಉಪಸ್ಥಿತರಿದ್ದರು. ಅಲ್ಲದೆ ಎಫ್‌ಸಿಕೆ ಅಧ್ಯಕ್ಷ ಹಾರೀಸ್, ಗೌರವಾಧ್ಯಕ್ಷ ಯಾಕೂಬ್ ಕೆಳಗಿನಕೆರೆ ಹಾಗೂ ಸಂಸ್ಥೆಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಅಸ್ತಾರ್ ಅಡ್ಡೂರು ಕಾರ್ಯಕ್ರಮ ನಿರೂಪಿಸಿದರು. ಬ್ಲಡ್ ಹೆಲ್ಪ್ ಲೈನ್ ಕಾರ್ಯನಿರ್ವಾಹಕ ಇಮ್ರಾನ್ ಅಡ್ಡೂರು ವಂದಿಸಿದರು.


- LATEST NEWS
ಅಡ್ಡೂರಿನಲ್ಲಿ ರಕ್ತದಾನ ಶಿಬಿರ:ಸಮಾಜ ಸೇವಕರಿಗೆ ಸನ್ಮಾನ
ಗುರುಪುರ: ಫ್ರೆಂಡ್ಸ್ ಸರ್ಕಲ್ ಕೆಳಗಿನಕೆರೆ (ರಿ.) ಅಡ್ಡೂರು ಮತ್ತು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ.), ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಇವುಗಳ ಜಂಟಿ ಆಶ್ರಯದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವು ರವಿವಾರ ಅಡ್ಡೂರಿನ ಸರ್ಕಾರಿ ಶಾಲೆಯಲ್ಲಿ ಯಶಸ್ವಿಯಾಗಿ ಜರುಗಿತು.ಅಡ್ಡೂರು ಬದ್ರಿಯಾ ಜುಮಾ ಮಸೀದಿ ಖತೀಬ್ ಸದಖತುಲ್ಲಾ ಫೈಝಿ ಅವರು ದುಆ ನೆರವೇರಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಮಾನವನ ಜೀವ ಉಳಿಸುವ ರಕ್ತದಾನವು ಮಹಾದಾನವಾಗಿದೆ. ಇದಕ್ಕಿಂತ ಮಿಗಿಲಾದ ಸೇವೆ ಇನ್ನೊಂದಿಲ್ಲ. ಯುವ ಸಮೂಹ ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ […]

