ಮಂಗಳೂರು: ದೇರಳಕಟ್ಟೆಯಲ್ಲಿ ನಡೆದ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ 16ನೇ ಘಟಿಕೋತ್ಸವ ಸಮಾರಂಭದಲ್ಲಿ ಆರ್. ತನ್ವಿ ಅವರು ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ.

ಜೈವಿಕ ವೈದ್ಯಕೀಯ ವಿಜ್ಞಾನ (ಬಯೋ ಮೆಡಿಕಲ್ ಸೈನ್ಸ್) ವಿಭಾಗದಲ್ಲಿ ತೋರಿದ ಉನ್ನತ ಶೈಕ್ಷಣಿಕ ಸಾಧನೆಗಾಗಿ ಅವರಿಗೆ ಈ ಪ್ರತಿಷ್ಠಿತ ಚಿನ್ನದ ಪದಕ ನೀಡಿ ಗೌರವಿಸಲಾಯಿತು.
ಘಟಿಕೋತ್ಸವ ಸಮಾರಂಭದಲ್ಲಿ ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ವಿಶಾಲ್ ಹೆಗ್ಡೆ, ಚಂಡೀಗಢದ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ (PGIMER) ನಿರ್ದೇಶಕ ಡಾ. ವಿವೇಕ್ ಲಾಲ್, ನಿಟ್ಟೆ ವಿವಿಯ ಕುಲಪತಿ ಪ್ರೊ. ಎಂ. ಎಸ್. ಮೂಡಿತ್ತಾಯ, ಪ್ರೊ-ಚಾನ್ಸಲರ್ ಪ್ರೊ. ಡಾ. ಎಂ. ಶಾಂತರಾಮ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದು, ಪದಕ ಪ್ರದಾನ ಮಾಡಿ ಶುಭ ಹಾರೈಸಿದರು.
ಚಿನ್ನದ ಪದಕ ವಿಜೇತೆ ಆರ್. ತನ್ವಿ ಅವರು ಹಿರಿಯ ಪತ್ರಕರ್ತ ರಾಮಕೃಷ್ಣ ಆರ್. ಹಾಗೂ ಡಾ. ರೇಶ್ಮಾ ಜಿ. ಉಳ್ಳಾಲ್ ದಂಪತಿಯ ಪುತ್ರಿಯಾಗಿದ್ದಾರೆ.
