canaratvnews

*ಅರ್ಕುಳದಲ್ಲಿ ಇನಾಯತ್ ಅಲಿ ನೇತೃತ್ವದ ಬೃಹತ್ ‘ಜನಸ್ಪಂದನಾ’ ಕಾರ್ಯಕ್ರಮಕ್ಕೆ ಅಭೂತಪೂರ್ವ ಸ್ಪಂದನೆ*

ಮಂಗಳೂರು: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅರ್ಕುಳ ವಳಚ್ಚಿಲ್‌ನ ಯಶಸ್ವಿ ಹಾಲ್‌ನಲ್ಲಿ ಅರ್ಕುಳ ಗ್ರಾಮ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ‘ಜನಸ್ಪಂದನಾ’ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ನಡೆದ ಈ ಶಿಬಿರದಲ್ಲಿ ಸಾವಿರಾರು ಜನರು ಪ್ರಯೋಜನ ಪಡೆದುಕೊಂಡರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು, “ಜನಸಾಮಾನ್ಯರ ಮನೆಬಾಗಿಲಿಗೆ ಸರ್ಕಾರದ ಸವಲತ್ತುಗಳನ್ನು ತಲುಪಿಸುವುದು ಮತ್ತು ಅವರ ಆರೋಗ್ಯದ ಹಿತದೃಷ್ಟಿಯಿಂದ ಈ ಜನಸ್ಪಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ” ಎಂದರು.

ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗಾಗಿ ಉಚಿತ ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ ಹಾಗೂ ಉಚಿತ ಕನ್ನಡಕಗಳನ್ನು ವಿತರಿಸಲಾಯಿತು. ಇದಲ್ಲದೆ, ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮತದಾರರ ಚೀಟಿ ನೋಂದಣಿ, ಆಧಾರ್ ಕಾರ್ಡ್ ತಿದ್ದುಪಡಿ ಹಾಗೂ ವಿವಿಧ ಸರ್ಕಾರಿ ಗ್ಯಾರೆಂಟಿ ಯೋಜನೆಗಳ ಸೇವೆಗಳನ್ನು ಸ್ಥಳದಲ್ಲೇ ಒದಗಿಸಲಾಯಿತು. ಇದೇ ಸಂದರ್ಭದಲ್ಲಿ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಬಿ. ರಮಾನಾಥ ರೈ, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಕೋಟ್ಯಾನ್, ಮಂಗಳೂರು ತಾಲೂಕು ಗ್ಯಾರೆಂಟಿ ಸಮಿತಿ ಅಧ್ಯಕ್ಷ ಸುರೇಂದ್ರ ಕಂಬಳಿ, ಯುವ ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಗಿರೀಶ್ ಆಳ್ವ, ಜಿಲ್ಲಾ ಅಧ್ಯಕ್ಷ ಇಬ್ರಾಹೀಂ ನವಾಝ್, ಮಂಗಳೂರು ಉತ್ತರ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ರೂಪೇಶ್ ರೈ, ಅಡ್ಯಾರ್ ವಲಯ ಕಾಂಗ್ರೆಸ್ ಅಧ್ಯಕ್ಷ ರೋನಾಲ್ಡ್ ಸಲ್ಡಾನಾ, ಗುರುಪುರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮುಫೀದ್, ಅಶ್ರಫ್ ಅಡ್ಯಾರ್, ತೌಫೀಕ್ ವಳಚ್ಚಿಲ್ ಹಾಗೂ ಪಕ್ಷದ ಪ್ರಮುಖ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು

Share News
Exit mobile version