ಕಾರ್ಕಳ: ಸಾಮಾಜಿಕ ಜಾಲತಾಣದಲ್ಲಿ ವಿವಾಹಿತೆ ಹಿಂದೂ ಮಹಿಳೆ ಮತ್ತು ಮುಸ್ಲಿಂ ಯುವಕನ ಕುರಿತು ವ್ಯಂಗ್ಯವಾಗಿ ಧರ್ಮ ಧರ್ಮಗಳ ನಡುವೆ ವೈಮನಸ್ಸು ಉಂಟುಮಾಡುವ ರೀತಿಯಲ್ಲಿ ಪೋಸ್ಟ್ ಹಾಕಿರುವ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಾದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುತ್ತೂರು ರಸ್ತೆಯ ನಿತೇಶ್ ಕೆ. (20) ಎಂಬಾತನನ್ನು ಪುತ್ತೂರು ತಾಲೂಕು ಕಲ್ಲಬ್ಬ ಜಂಕ್ಷನ್ ಬಳಿ ಜ.30ರಂದು ಹಾಗೂ ಕಡಬ ತಾಲೂಕು ಗುಂಡ್ಯ ಸಿರಿಬಾಗಿಲು ಗ್ರಾಮದ ಹಿತೇಶ್ ಎ.(19) ಎಂಬಾತನನ್ನು ಫೆ.1ರಂದು ಮಂಗಳೂರಿನ ಲಾಲ್‌ಬಾಗ್ ಬಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಬ್ಬರು ಆರೋಪಿಗಳ ಮೊಬೈಲ್‌ಗಳನ್ನು ಸ್ವಾಧೀನ ಪಡಿಸಿಕೊಂಡಿದ್ದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿ ಸಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

