• Home  
  • ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹುಟ್ಟುಹಬ್ಬ: ನಿರಾಶ್ರಿತರಿಗೆ ಊಟ ಹಂಚಿದ ಯುವ ಜನತಾದಳ
- LATEST NEWS

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹುಟ್ಟುಹಬ್ಬ: ನಿರಾಶ್ರಿತರಿಗೆ ಊಟ ಹಂಚಿದ ಯುವ ಜನತಾದಳ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳದ ವತಿಯಿಂದ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಹುಟ್ಟುಹಬ್ಬವನ್ನು ನಗರದ ನಿರಾಶ್ರಿತರಿಗೆ ಊಟ ಹಂಚುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಯುವ ಜನತಾದಳ ಅಧ್ಯಕ್ಷ ಅಕ್ಷಿತ್ ಸುವರ್ಣ, “ದೇಶದ 11ನೇ ಪ್ರಧಾನಿಯಾಗಿ ಹೆಚ್.ಡಿ. ದೇವೇಗೌಡರು ಮಾಡಿದ ಅಭಿವೃದ್ಧಿ ಕಾರ್ಯಗಳು ಸದಾ ಸ್ಮರಣೀಯ. ಮಹಿಳಾ ಮೀಸಲಾತಿ, ಕಾಶ್ಮೀರ ಸಮಸ್ಯೆ ಪರಿಹಾರ, ರೈತರಿಗೆ ರಸಗೊಬ್ಬರ […]

Share News

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳದ ವತಿಯಿಂದ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಹುಟ್ಟುಹಬ್ಬವನ್ನು ನಗರದ ನಿರಾಶ್ರಿತರಿಗೆ ಊಟ ಹಂಚುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಯುವ ಜನತಾದಳ ಅಧ್ಯಕ್ಷ ಅಕ್ಷಿತ್ ಸುವರ್ಣ, “ದೇಶದ 11ನೇ ಪ್ರಧಾನಿಯಾಗಿ ಹೆಚ್.ಡಿ. ದೇವೇಗೌಡರು ಮಾಡಿದ ಅಭಿವೃದ್ಧಿ ಕಾರ್ಯಗಳು ಸದಾ ಸ್ಮರಣೀಯ. ಮಹಿಳಾ ಮೀಸಲಾತಿ, ಕಾಶ್ಮೀರ ಸಮಸ್ಯೆ ಪರಿಹಾರ, ರೈತರಿಗೆ ರಸಗೊಬ್ಬರ ಸಬ್ಸಿಡಿ ಹಾಗೂ ಕಾವೇರಿ-ಮಹಾದಾಯಿ ನೀರಾವರಿ ಹೋರಾಟಗಳಲ್ಲಿ ಅವರ ಕೊಡುಗೆ ಅಪಾರ. ರೈತರ ಮೇಲಿನ ಅವರ ಕಾಳಜಿ ಇಂದಿನ ರಾಜಕಾರಣಿಗಳಿಗೆ ಮತ್ತು ಯುವಕರಿಗೆ ಮಾರ್ಗದರ್ಶನವಾಗಿದೆ. ಭಗವಂತ ಅವರಿಗೆ ಇನ್ನಷ್ಟು ಆಯಸ್ಸು, ಆರೋಗ್ಯ ಕರುಣಿಸಲಿ” ಎಂದು ಹಾರೈಸಿದರು.

ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಾಧ್ಯಕ್ಷ ವಸಂತ್ ಪೂಜಾರಿ ಅವರು ಮಾತನಾಡಿ ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಜೆಡಿಎಸ್ ಮೀನುಗಾರ ಘಟಕದ ರಾಜ್ಯಾಧ್ಯಕ್ಷ ರತ್ನಾಕರ ಸುವರ್ಣ, ಯುವ ಜೆಡಿಎಸ್ ಮಂಗಳೂರು ಉತ್ತರ ವಿಧಾನಸಭಾ ಅಧ್ಯಕ್ಷ ರತೀಶ್ ಕರ್ಕೇರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಿತೇಶ್ ರೈ, ಮಂಗಳೂರು ದಕ್ಷಿಣ ಕ್ಷೇತ್ರ ಅಧ್ಯಕ್ಷ ಸತ್ತಾರ್ ಬಂದರು, ಜಿಲ್ಲಾ ಮುಖಂಡರಾದ ವಿನ್ಸೆಂಟ್ ಸುರತ್ಕಲ್, ಪುಷ್ಪರಾಜ್, ಭಾರತಿ, ಕನಕದಾಸ ಕುಳೂರು, ಚೂಡಮಣಿ ಹಾಗೂ ಯುವ ಜೆಡಿಎಸ್ ಪದಾಧಿಕಾರಿಗಳಾದ ಸುಶಾಂತ್ ಪೂಜಾರಿ, ವಿಖ್ಯಾತ್, ಪ್ರೀತೇಶ್, ರಕ್ಷಿತ್, ವಿನೀತ್ ಪೂಜಾರಿ, ಆದರ್ಶ್ ಪೂಜಾರಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Share News