• Home  
  • ಮಂಗನ ಕಾಯಿಲೆ ಹಾಗೂ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ: ಆರೋಗ್ಯ ಸಚಿವರ ನೇತೃತ್ವದ ಸಭೆಯಲ್ಲಿ ಶಾಸಕ ಅಶೋಕ್ ರೈ ಭಾಗಿ
- DAKSHINA KANNADA - HOME - LATEST NEWS

ಮಂಗನ ಕಾಯಿಲೆ ಹಾಗೂ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ: ಆರೋಗ್ಯ ಸಚಿವರ ನೇತೃತ್ವದ ಸಭೆಯಲ್ಲಿ ಶಾಸಕ ಅಶೋಕ್ ರೈ ಭಾಗಿ

ಪುತ್ತೂರು: ರಾಜ್ಯಾದ್ಯಂತ ಕೆಲವೊಂದು ಸಾಂಕ್ರಾಮಿಕ ರೋಗಗಳ ಬಗ್ಗೆ ಅರಿವು ಹಾಗೂ ಮುನ್ನೆಚ್ಚರಿಕೆಯನ್ನು ನೀಡುವ ಕುರಿತು ಆರೋಗ್ಯ ಸಚಿವ ಯು ಟಿ ಖಾದರ್ ಅವರ ನೇತೃತ್ವದಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ನಡೆದಿದ್ದು ಈ ಸಭೆಯಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರು ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯು ಆರೋಗ್ಯ ಸಚಿವ ಯು ಟಿ ಖಾದರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ರಾಜ್ಯದ ಕೆಲವೊಂದು ಕಡೆಗಳಲ್ಲಿ ಅಪಾಯಕಾರಿ ಮಂಗನ ಕಾಯಿಲೆ ಕಂಡು ಬಂದಿದ್ದು ಇದರ […]

Share News

ಪುತ್ತೂರು: ರಾಜ್ಯಾದ್ಯಂತ ಕೆಲವೊಂದು ಸಾಂಕ್ರಾಮಿಕ ರೋಗಗಳ ಬಗ್ಗೆ ಅರಿವು ಹಾಗೂ ಮುನ್ನೆಚ್ಚರಿಕೆಯನ್ನು ನೀಡುವ ಕುರಿತು ಆರೋಗ್ಯ ಸಚಿವ ಯು ಟಿ ಖಾದರ್ ಅವರ ನೇತೃತ್ವದಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ನಡೆದಿದ್ದು ಈ ಸಭೆಯಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರು ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.


ಸಭೆಯು ಆರೋಗ್ಯ ಸಚಿವ ಯು ಟಿ ಖಾದರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ರಾಜ್ಯದ ಕೆಲವೊಂದು ಕಡೆಗಳಲ್ಲಿ ಅಪಾಯಕಾರಿ ಮಂಗನ ಕಾಯಿಲೆ ಕಂಡು ಬಂದಿದ್ದು ಇದರ ಬಗ್ಗೆ ಸಾರ್ವಜನಿಕರಲ್ಲಿ ಮುನ್ನೆಚ್ಚರಿಕೆ ಹಾಗೂ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಬೇಕಾದ ಅಗತ್ಯವಿದ್ದು ಮತ್ತು ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಇಲಾಖೆಯು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಕರಾವಳಿ ಭಾಗದಲ್ಲಿ ಈ ಕಾಯಿಲೆ ಕಾಣಿಸಿಕೊಳ್ಳದೇ ಇದ್ದರೂ ಅದರ ಬಗ್ಗೆ ಜಾಗರೂಕರಾಗಿರುವಂತೆ ಮತ್ತು ಜ್ವರದ ಬಗ್ಗೆ ಎಚ್ಚರಿಕೆ ವಹಿಸುವಂತೆ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವಂತೆಯೂ ಇಲಾಖಾಧಿಕಾರಿಗಳಿಗೆ ಸೂಚನೆಯನ್ನು ನೀಡಲಾಯಿತು.
ಜಾಗೃತಿಮೂಡಿಸುವ ಕೆಲಸ ಆಗಬೇಕು: ಅಶೋಕ್ ರೈ

ಸಭೆಯಲ್ಲಿ ಮಾತನಾಡಿದ ಪುತ್ತೂರು ಶಾಸಕ ಅಶೋಕ್ ರೈ ಅವರು ಆರೋಗ್ಯ ಸಚಿವ ಯು ಟಿ ಖಾದರ್ ರವರು ಜನರ ಆರೋಗ್ಯ ಬಗ್ಗೆ ಕಾಳಜಿವಹಿಸುತ್ತಿರುವುದು ಉತ್ತಮ ಕಾರ್ಯವಾಗಿದೆ. ಕೆಲವೊಂದು ಸಾಂಕ್ರಾಮಿಕ ರೋಗಗಳು ಮಳೆಗಾಲದಲ್ಲಿ ತೀವ್ರವಾಗಿ ಕಾಣಿಸಿಕೊಳ್ಳುತ್ತದೆ. ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯಾ ಸೇರಿದಂತೆ ಕೆಲವೊಂದು ಅಪಾಯಕಾರಿ ಸಾಂಕ್ರಾಮಿಕ ರೋಗಗಳ ಬಗ್ಗೆ ಪ್ರತೀ ವರ್ಷವೂ ಜಾಗೃತಿಮೂಡಿಸುವ ಕೆಲಸ ನಡೆಯುತ್ತದೆ. ಈ ಕೆಲಸವನ್ನು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ಅಳವಡಿಸಿಕೊಳ್ಳಬೇಕಿದೆ. ಗ್ರಾಮದ ಮನೆಗಳಿಗೆ ಭೇಟಿ ನೀಡುವ ಆಶಾ ಕಾರ್ಯಕರ್ತೆಯರು ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದರೂ ಅದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡುವಲ್ಲಿ ಇಲಾಖೆ ಮುತುವರ್ಜಿವಹಿಸುವ ಅಗತ್ಯವಿದೆ ಎಂದು ಸಭೆಯಲ್ಲಿ ಶಾಸಕರು ತಿಳಿಸಿದರು.

ಸಭೆಯಲ್ಲಿ ಆರೋಗ್ಯ ಇಲಾಖೆಯ ಪ್ರಮುಖ ಅಧಿಕಾರಿಗಳು ಭಾಗವಹಿಸಿದ್ದರು.

Share News