DAKSHINA KANNADAHOMELATEST NEWS

ಭಾರೀ ಮಳೆ ಸಾಧ್ಯತೆ: ಆ.3 ರಂದು ಮಂಗಳೂರು & ಪುತ್ತೂರು ಉಪವಿಭಾಗದ ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ನೀಡಿರುವ ಹವಾಮಾನ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾರೀ ಮಳೆ ಮುಂದುವರಿಯುವ ಸೂಚನೆ ಇದೆ. ಈ ಹಿನ್ನೆಲೆ ಕೆಲವು ತಾಲೂಕುಗಳ ಶಾಲಾ-ಕಾಲೇಜಿಗೆ ಆ.3ರಂದು ರಜೆ ಘೋಷಿಸಲಾಗಿದೆ.

ಮಂಗಳೂರು ಉಪವಿಭಾಗ ಹಾಗೂ ಪುತ್ತೂರು ಉಪವಿಭಾಗದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು ಉಪವಿಭಾಗದ ತಾಲೂಕುಗಳಾದ ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮೂಲ್ಕಿ ಹಾಗೂ ಉಳ್ಳಾಲದ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆಗಳು 10ನೇ ತರಗತಿಯವರೆಗೆ (ವಸತಿ ಶಾಲೆಗಳು ಸೇರಿದಂತೆ) ರಜೆ ಘೋಷಿಸಲಾಗಿದೆ.

ಪುತ್ತೂರು ಉಪವಿಭಾಗದ ಪುತ್ತೂರು ಬೆಳ್ತಂಗಡಿ, ಸುಳ್ಯ, ಕಡಬ, ತಾಲೂಕುಗಳಲ್ಲಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜು (12ನೇ ತರಗತಿ), ITI ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

 

ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ತುರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಆದೇಶ ಹೊರಡಿಸಿದ್ದಾರೆ.

ಇನ್ನುಳಿದ ಪ್ರಮುಖ ಆದೇಶಗಳು ಮತ್ತು ಸುರಕ್ಷತಾ ಮಾರ್ಗಸೂಚಿಗಳು:

ನದಿ/ಸಮುದ್ರ ತೀರಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ: ಸಾರ್ವಜನಿಕರು ಹಾಗೂ ಪ್ರವಾಸಿಗರು ನೀರಿರುವ ತಗ್ಗು ಪ್ರದೇಶಗಳು, ಕೆರೆ, ನದಿ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪೋಷಕರು ತಮ್ಮ ಮಕ್ಕಳನ್ನು ಈ ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸಬೇಕು.

ಮೀನುಗಾರರಿಗೆ ಕಟ್ಟುನಿಟ್ಟಿನ ಎಚ್ಚರಿಕೆ: ಸಮುದ್ರದ ಅಲೆಗಳ ಅಬ್ಬರ ತೀವ್ರವಾಗಿರುವುದರಿಂದ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು.

ಅಧಿಕಾರಿಗಳ ಕೇಂದ್ರಸ್ಥಾನ ವಾಸ್ತವ್ಯ: ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನದಲ್ಲೇ ಇದ್ದು, ವಿಪತ್ತು ನಿರ್ವಹಣಾ ಕಾರ್ಯಗಳನ್ನು ಚಾಚೂ ತಪ್ಪದೆ ನಿರ್ವಹಿಸಬೇಕು. ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಿ ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು.

ಕಾಳಜಿ ಕೇಂದ್ರಗಳ ಸ್ಥಾಪನೆ: ಪ್ರತೀ ತಾಲ್ಲೂಕುಗಳಲ್ಲಿ ತಕ್ಷಣವೇ ಸಾರ್ವಜನಿಕರ ನೆರವಿಗಾಗಿ ಕಾಳಜಿ ಕೇಂದ್ರಗಳನ್ನು (Care Centers) ತೆರೆದು ಸನ್ನದ್ಧ ಸ್ಥಿತಿಯಲ್ಲಿಡಲು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಆದೇಶಿಸಲಾಗಿದೆ.

ತುರ್ತು ಸಹಾಯವಾಣಿ ಸಂಖ್ಯೆಗಳು: ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆ ಅಥವಾ ತುರ್ತು ನೆರವಿಗಾಗಿ ಸಾರ್ವಜನಿಕರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಬಹುದು: ಉಚಿತ ಸಹಾಯವಾಣಿ (Toll-Free): 1077ಜಿಲ್ಲಾ ನಿಯಂತ್ರಣ ಕೊಠಡಿ (Direct Lines): 0824-2442590 / 0824-2420065ವಾಟ್ಸಾಪ್ ಸಹಾಯವಾಣಿ (WhatsApp Helpline): 9483908000

Share News