• Home  
  • ಹಿಂದೂ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು: ವಿಚಾರಣೆಗೆ ಹಾಜರಾಗುವಂತೆ ಆದೇಶ
- DAKSHINA KANNADA - HOME - LATEST NEWS

ಹಿಂದೂ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು: ವಿಚಾರಣೆಗೆ ಹಾಜರಾಗುವಂತೆ ಆದೇಶ

ಪುತ್ತೂರು: ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಅವರ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ. ಪುತ್ತೂರು ತಾಲೂಕು ಒಳಮೊಗ್ರು ಗ್ರಾಮ ಹೊಸಮನೆ ನಿವಾಸಿ ಅಜಿತ್ ರೈ ವಿರುದ್ಧ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಕರ್ನಾಟಕ ಪೊಲೀಸ್‌ ಕಾಯ್ದೆ 1963ರ ಕಲಂ 55ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಆದೇಶ ಹೊರಡಿಸುವ ಕುರಿತು ಸಲ್ಲಿಸಿರುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ವಿಚಾರಣೆ ಸಹಾಯಕ ಆಯುಕ್ತರ ನ್ಯಾಯಾಲಯದ ಸಭಾಂಗಣದಲ್ಲಿ ಫೆಬ್ರವರಿ […]

Share News

ಪುತ್ತೂರು: ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಅವರ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ.

ಪುತ್ತೂರು ತಾಲೂಕು ಒಳಮೊಗ್ರು ಗ್ರಾಮ ಹೊಸಮನೆ ನಿವಾಸಿ ಅಜಿತ್ ರೈ ವಿರುದ್ಧ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಕರ್ನಾಟಕ ಪೊಲೀಸ್‌ ಕಾಯ್ದೆ 1963ರ ಕಲಂ 55ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಆದೇಶ ಹೊರಡಿಸುವ ಕುರಿತು ಸಲ್ಲಿಸಿರುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ವಿಚಾರಣೆ ಸಹಾಯಕ ಆಯುಕ್ತರ ನ್ಯಾಯಾಲಯದ ಸಭಾಂಗಣದಲ್ಲಿ ಫೆಬ್ರವರಿ 25ರಂದು ನಡೆಯಲಿದೆ. ಸದ್ರಿ ಪ್ರಕರಣದಲ್ಲಿ ಸ್ವತಃ ಯಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು, ತಪ್ಪಿದಲ್ಲಿ ಸದ್ರಿ ಪ್ರಕರಣದಲ್ಲಿ ಆಸಕ್ತಿ ಇಲ್ಲವೆಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

Share News