• Home  
  • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ: ಜುಲೈ 24 ರಂದು ಶಾಲಾ-ಕಾಲೇಜುಗಳಿಗೆ ಕಡ್ಡಾಯ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ
- DAKSHINA KANNADA - HOME - LATEST NEWS

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ: ಜುಲೈ 24 ರಂದು ಶಾಲಾ-ಕಾಲೇಜುಗಳಿಗೆ ಕಡ್ಡಾಯ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಜುಲೈ 24:ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ನೀಡಿರುವ ಭಾರಿ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಕಠಿಣ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹೊರಡಿಸಿರುವ ಪ್ರಮುಖ ಆದೇಶಗಳು ಈ ಕೆಳಗಿನಂತಿವೆ: ಶಾಲಾ-ಕಾಲೇಜುಗಳಿಗೆ ಕಡ್ಡಾಯ ರಜೆ: ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು, […]

Share News

ಮಂಗಳೂರು, ಜುಲೈ 24: ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕಠಿಣ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಜಿಲ್ಲೆಯಾದ್ಯಂತ ತುರ್ತು ಸುರಕ್ಷತಾ ಆದೇಶಗಳನ್ನು ಹೊರಡಿಸಿದ್ದಾರೆ.

ಶಾಲಾ-ಕಾಲೇಜುಗಳಿಗೆ ಕಡ್ಡಾಯ ರಜೆ: ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, 12ನೇ ತರಗತಿಯವರೆಗಿನ ಎಲ್ಲಾ ಪದವಿ ಪೂರ್ವ (PUC) ಕಾಲೇಜುಗಳು ಸೇರಿದಂತೆ ಎಲ್ಲಾ ಐಟಿಐ (ITI) ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ದಿನಾಂಕ 24.07.2026ರ ಶುಕ್ರವಾರದಂದು ಕಡ್ಡಾಯ ರಜೆ ಘೋಷಿಸಲಾಗಿದೆ. ಈ ಆದೇಶವು ಜಿಲ್ಲೆಯ ಎಲ್ಲಾ ವಸತಿ ಶಾಲೆ ಮತ್ತು ಕಾಲೇಜುಗಳಿಗೂ ಅನ್ವಯಿಸುತ್ತದೆ. ಜಿಲ್ಲಾಡಳಿತದ ಈ ನಿಯಮವನ್ನು ಉಲ್ಲಂಘಿಸಿ ತರಗತಿ ನಡೆಸುವ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದ್ದಾರೆ.

ನದಿ/ಸಮುದ್ರತೀರಕ್ಕೆ ನಿಷೇಧ: ಪ್ರವಾಸಿಗರು ಮತ್ತು ಸಾರ್ವಜನಿಕರು ನದಿತೀರ ಹಾಗೂ ಸಮುದ್ರತೀರಗಳಿಗೆ ತೆರಳದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಪಾಲಕರಿಗೆ ಎಚ್ಚರಿಕೆ: ಮಕ್ಕಳು ನೀರಿರುವ ತಗ್ಗು ಪ್ರದೇಶಗಳು, ಕೆರೆ, ನದಿ ಹಾಗೂ ಸಮುದ್ರತೀರಕ್ಕೆ ಹೋಗದಂತೆ ಪಾಲಕರು ಕಡ್ಡಾಯವಾಗಿ ನಿಗಾವಹಿಸಬೇಕು.

ಮೀನುಗಾರರಿಗೆ ಸೂಚನೆ: ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು.

ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ: ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯಗಳನ್ನು ಚಾಚೂ ತಪ್ಪದೆ ನಿರ್ವಹಿಸಬೇಕು. ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು. ಪ್ರತಿ ತಾಲೂಕಿನಲ್ಲೂ ಕಾಳಜಿ ಕೇಂದ್ರಗಳನ್ನು ಸನ್ನದ್ಧ ಸ್ಥಿತಿಯಲ್ಲಿಡಲು ಆದೇಶಿಸಲಾಗಿದೆ.

ತುರ್ತು ಸಹಾಯವಾಣಿ:ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆ ಅಥವಾ ತುರ್ತು ಪರಿಸ್ಥಿತಿಗಳಿದ್ದಲ್ಲಿ ಸಾರ್ವಜನಿಕರು ತಕ್ಷಣ ಜಿಲ್ಲಾ ನಿಯಂತ್ರಣ ಕೊಠಡಿಯ ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಬಹುದು:ಟೋಲ್ ಫ್ರೀ ಸಂಖ್ಯೆ: 1077

Share News