• Home  
  • ಜೂ. 12ರ ಗುರುವಾರ ದ.ಕ. ಜಿಲ್ಲೆಯಲ್ಲಿ ಶಾಲೆ ಅಂಗನವಾಡಿಗಳಿಗೆ ರಜೆ
- Breaking News - DAKSHINA KANNADA - LATEST NEWS

ಜೂ. 12ರ ಗುರುವಾರ ದ.ಕ. ಜಿಲ್ಲೆಯಲ್ಲಿ ಶಾಲೆ ಅಂಗನವಾಡಿಗಳಿಗೆ ರಜೆ

ಮಂಗಳೂರು, ಜೂ.12: ದ.ಕ. ಜಲ್ಲೆಯಲ್ಲಿ ಭಾರೀ ಮಳೆ ಮುಂದುವರೆದಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಜೂ.12ರ ಗುರುವಾರ ಶಾಲೆ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಖಾಸಗಿ ಶಾಲೆ ಅಂಗನವಾಡಿಗಳಿಗೆ ರಜೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿಂದ ಜಿಲ್ಲೆಯಾದ್ಯಂತ ಆರೆಂಜ್ – ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.

  1. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 12.06.2025ರಂದು ರಜೆಯನ್ನು ಘೋಷಿಸಲಾಗಿರುತ್ತದೆ.
  2. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.
  3. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.
  4. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು.
  5. ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.
  6. ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.
  7. ನಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ದ ಸ್ಥಿತಿಯಲ್ಲಿರಿಸಿಕೊಳ್ಳುವುದು.
Share News

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678