ವಿಟ್ಲ: ಕೇರಳದಿಂದ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಅಕ್ರಮವಾಗಿ ಕರ್ನಾಟಕ್ಕೆ ಸಾಗಾಟ ಮಾಡುತ್ತಿದ್ದಾಗ ದಾಳಿ ನಡೆಸಿ ಎರಡು ಲಾರಿಗಳನ್ನು ವಶಕ್ಕೆ ಪಡೆದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಂಧರ್ಭಿಕ ಚಿತ್ರ
ಫೆ.25ರಂದು ವಿಟ್ಲ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕ ರಾಮಕೃಷ್ಣ ಅವರಿಗೆ ಕೇರಳ ಕಡೆಯಿಂದ ಪೆರುವಾಯಿ ಮಾರ್ಗವಾಗಿ ಲಾರಿಗಳಲ್ಲಿ ಕೆಂಪು ಕಲ್ಲುಗಳನ್ನು ಅಕ್ರಮವಾಗಿ ಕರ್ನಾಟಕ್ಕೆ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ದೊರೆಯುತ್ತದೆ. ಈ ವೇಳೆ ತಮ್ಮ ಸಿಬ್ಬಂದಿಯೊಂದಿಗೆ ಬಂಟ್ವಾಳ ಪೆರುವಾಯಿ ಗ್ರಾಮದ ಬೆರಿಪದವು ಎಂಬಲ್ಲಿ ದಾಳಿ ನಡೆಸಿದಾಗ ಕೆಂಪುಕಲ್ಲುಗಳನ್ನು ತುಂಬಿಸಿಕೊಂಡು ಬರುತ್ತಿದ್ದ KA-21-C-0562 ಹಾಗೂ KA-12-A-2252 ನೇ ನೋಂದಣಿಯ 02 ಲಾರಿಗಳನ್ನು ತಡೆದು ನಿಲ್ಲಿಸಿದ್ದಾರೆ.
ಅದರ ಚಾಲಕರನ್ನು ವಿಚಾರಿಸಿದಾಗ ವಿಟ್ಲ ನಿವಾಸಿ ಸಾಧಿಕ್ (25) ಎಂಬುದಾಗಿ ಮತ್ತೊಂದು ಲಾರಿಯ ಚಾಲಕ ವಿಟ್ಲ ನಿವಾಸಿ ಮೊಹಮ್ಮದ್ (46) ಎಂಬುದಾಗಿ ತಿಳಿಸಿದ್ದಾರೆ.
ಸದ್ಯ ಈ ಕೆಂಪು ಕಲ್ಲುಗಳನ್ನು ಕೇರಳದ ಧರ್ಮತ್ತಡ್ಕದಿಂದ ವೇಣು ಎಂಬವರು ತುಂಬಿಸಿ ಕಳುಹಿಸಿಕೊಟ್ಟಿದ್ದಾರೆ ಎಂದು ಚಾಲಕರು ಮಾಹಿತಿ ನೀಡಿದ್ದು, ಸದ್ಯ ಲಾರಿ ಚಾಲಕರನ್ನು ವಶಕ್ಕೆ ಪಡೆದು, ಲೋಡ್ ಸಹಿತವಾಗಿ ಲಾರಿಗಳನ್ನು ಸ್ವಾಧೀನಪಡಿಸಿ, ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 49/2026, ಕಲಂ: 303(2) BNS 2023, ಕಲಂ. 4(1), 21 MMDR (MINES AND MINERALS REGULATION OF DEVELOPMENT) ACT 1957, ಕಲಂ: 3, 44 KARNATAKA MINOR MINERAL CONSISTENT RULE 1994 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

