ಮಂಗಳೂರು: ಯುವಜನರಲ್ಲಿ ಸಾಂಸ್ಕೃತಿಕ ವಿನಿಮಯ ಮತ್ತು ರಾಷ್ಟ್ರೀಯ ಭಾವೈಕ್ಯತೆಯನ್ನು ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಲಾದ ‘ಅಂತರ ರಾಜ್ಯ ಯುವ ವಿನಿಮಯ 2025-26’ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಮಂಗಳೂರಿನಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು. ಈ ವರ್ಷದ ಕಾರ್ಯಕ್ರಮದಲ್ಲಿ ತೆಲಂಗಾಣ ರಾಜ್ಯವು ಅತಿಥಿ ರಾಜ್ಯವಾಗಿ ಭಾಗವಹಿಸುತ್ತಿದೆ.

ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಮೇರಾ ಯುವ ಭಾರತ್ (MY Bharat) ದಕ್ಷಿಣ ಕನ್ನಡ, ಮಾಂಡ್ ಶೋಭಾಣ್ ಶಕ್ತಿನಗರ, ಮತ್ತು ಮಂಗಳೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (NSS) ಇವುಗಳ ಜಂಟಿ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಯುವಶಕ್ತಿಯೇ ರಾಷ್ಟ್ರದ ಆಸ್ತಿ: ಯು.ಟಿ. ಖಾದರ್
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು, “ಯುವಜನತೆ ದೇಶದ ನಿಜವಾದ ಆಸ್ತಿ. ಇಂತಹ ವಿನಿಮಯ ಕಾರ್ಯಕ್ರಮಗಳು ವಿಭಿನ್ನ ರಾಜ್ಯಗಳ ಸಂಸ್ಕೃತಿ ಮತ್ತು ಆಚಾರ-ವಿಚಾರಗಳನ್ನು ಅರಿಯಲು ಸಹಕಾರಿ,” ಎಂದು ತಿಳಿಸಿದರು.

ಶಾಸಕ ವೇದವ್ಯಾಸ ಕಾಮತ್ ಅವರು ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿ, ಮಂಗಳೂರಿನ ಶೈಕ್ಷಣಿಕ ಶ್ರೀಮಂತಿಕೆ ಮತ್ತು ಕರಾವಳಿಯ ಸಾಂಸ್ಕೃತಿಕ ಪರಂಪರೆಯ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿದರು.
ಗಣ್ಯರ ಉಪಸ್ಥಿತಿ:
ಕಾರ್ಯಕ್ರಮದಲ್ಲಿ ಮಂಗಳೂರು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುಮಾರ್ ಹೊಳ್ಳ, ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಕೆ.ಟಿ.ಕೆ, ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾಧ್ಯಕ್ಷ ಶಾಂತಾರಾಮ್ ಶೆಟ್ಟಿ, ಮಾಂಡ್ ಶೋಭಾಣ್ ಅಧ್ಯಕ್ಷ ಲುವಿ ಪಿಂಟೊ, ಸೀಮಾ ಪ್ರಭು, ಜಗದೀಶ್ ಕೆ ಮತ್ತು ಜಿಲ್ಲಾ ತರಬೇತುದಾರ ಶ್ರೀಕಾಂತ್ ಉಪಸ್ಥಿತರಿದ್ದರು.

ಕೆನರಾ ಕಾಲೇಜಿನ ಎನ್‌ಎಸ್‌ಎಸ್ ಸ್ವಯಂಸೇವಕಿ ಐಸಿರಿ ಐತಾಳ್ ಸ್ವಾಗತಿಸಿದರು. ಸರ್ಕಾರಿ ಕಾಲೇಜು ಹಳೆಯಂಗಡಿಯ ಎಂವೈ ಭಾರತ್ ಸ್ವಯಂಸೇವಕಿ ಹಿತಾ ಉಮೇಶ್ ಕಾರ್ಯಕ್ರಮದ ನೇತೃತ್ವ ವಹಿಸಿ, ವಂದನಾರ್ಪಣೆ ಮಾಡಿದರು. ವಿವಿಧ ರಾಜ್ಯಗಳ ಯುವ ಪ್ರತಿನಿಧಿಗಳ ಸಮ್ಮುಖದಲ್ಲಿ ಸಮಾರಂಭವು ಸೌಹಾರ್ದಯುತವಾಗಿ ನೆರವೇರಿತು.