ಮಂಗಳೂರು: ಯುವಜನರಲ್ಲಿ ಸಾಂಸ್ಕೃತಿಕ ವಿನಿಮಯ ಮತ್ತು ರಾಷ್ಟ್ರೀಯ ಭಾವೈಕ್ಯತೆಯನ್ನು ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಲಾದ ‘ಅಂತರ ರಾಜ್ಯ ಯುವ ವಿನಿಮಯ 2025-26’ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಮಂಗಳೂರಿನಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು. ಈ ವರ್ಷದ ಕಾರ್ಯಕ್ರಮದಲ್ಲಿ ತೆಲಂಗಾಣ ರಾಜ್ಯವು ಅತಿಥಿ ರಾಜ್ಯವಾಗಿ ಭಾಗವಹಿಸುತ್ತಿದೆ.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು, “ಯುವಜನತೆ ದೇಶದ ನಿಜವಾದ ಆಸ್ತಿ. ಇಂತಹ ವಿನಿಮಯ ಕಾರ್ಯಕ್ರಮಗಳು ವಿಭಿನ್ನ ರಾಜ್ಯಗಳ ಸಂಸ್ಕೃತಿ ಮತ್ತು ಆಚಾರ-ವಿಚಾರಗಳನ್ನು ಅರಿಯಲು ಸಹಕಾರಿ,” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಂಗಳೂರು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುಮಾರ್ ಹೊಳ್ಳ, ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಕೆ.ಟಿ.ಕೆ, ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾಧ್ಯಕ್ಷ ಶಾಂತಾರಾಮ್ ಶೆಟ್ಟಿ, ಮಾಂಡ್ ಶೋಭಾಣ್ ಅಧ್ಯಕ್ಷ ಲುವಿ ಪಿಂಟೊ, ಸೀಮಾ ಪ್ರಭು, ಜಗದೀಶ್ ಕೆ ಮತ್ತು ಜಿಲ್ಲಾ ತರಬೇತುದಾರ ಶ್ರೀಕಾಂತ್ ಉಪಸ್ಥಿತರಿದ್ದರು.











