• Home  
  • *ವಿಶ್ವ ಮಹಿಳಾ ದಿನಾಚರಣೆ: ಸಾಹಿತಿ ಡಾ. ಮಾಲತಿ ಶೆಟ್ಟಿ ಮಾಣೂರು ಅವರಿಗೆ ಸನ್ಮಾನ*
- DAKSHINA KANNADA

*ವಿಶ್ವ ಮಹಿಳಾ ದಿನಾಚರಣೆ: ಸಾಹಿತಿ ಡಾ. ಮಾಲತಿ ಶೆಟ್ಟಿ ಮಾಣೂರು ಅವರಿಗೆ ಸನ್ಮಾನ*

ಮಂಗಳೂರು: ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸಂಘ ಹಾಗೂ ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸೌಹಾರ್ದ ಸಹಕಾರಿ ಸಂಘದ ಜಂಟಿ ಆಶ್ರಯದಲ್ಲಿ ಮಾರ್ಚ್ 8ರಂದು ನಗರದ ಕಡೆಮೊಗರು ಸಭಾಂಗಣದಲ್ಲಿ ‘ವಿಶ್ವ ಮಹಿಳಾ ದಿನಾಚರಣೆ’ಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಖ್ಯಾತ ಸಾಹಿತಿ, ‘ಅಮೃತ ಪ್ರಕಾಶ’ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಅವರನ್ನು ಗುರುತಿಸಿ, ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ. ಗ್ಯಾರೇಜ್ ಮಾಲಕರ ಸಂಘದ […]

Share News

ಮಂಗಳೂರು: ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸಂಘ ಹಾಗೂ ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸೌಹಾರ್ದ ಸಹಕಾರಿ ಸಂಘದ ಜಂಟಿ ಆಶ್ರಯದಲ್ಲಿ ಮಾರ್ಚ್ 8ರಂದು ನಗರದ ಕಡೆಮೊಗರು ಸಭಾಂಗಣದಲ್ಲಿ ‘ವಿಶ್ವ ಮಹಿಳಾ ದಿನಾಚರಣೆ’ಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಖ್ಯಾತ ಸಾಹಿತಿ, ‘ಅಮೃತ ಪ್ರಕಾಶ’ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಅವರನ್ನು ಗುರುತಿಸಿ, ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ. ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷರಾದ ದಿನಕರ್ ಕುಲಾಲ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾರ್ಮಿಕ ಅಧಿಕಾರಿಗಳಾದ ವಿಲ್ಮಾ ಎಲಿಜಬಿತ್ ಮತ್ತು ಕುಮಾರ್ ಬಿ.ಎಲ್. ಉಪಸ್ಥಿತರಿದ್ದರು.
ವೇದಿಕೆಯಲ್ಲಿ ದ.ಕ. ಗ್ಯಾರೇಜ್ ಮಾಲಕರ ಸೌಹಾರ್ದ ಸಹಕಾರಿ ಸಂಘದ ಚೇರ್ಮನ್ ಹಾಗೂ ಸಂಘದ ಅಧ್ಯಕ್ಷರಾದ ಎ. ಜನಾರ್ಧನ್, ಪದಾಧಿಕಾರಿಗಳಾದ ಪುಂಡಲೀಕ ಸುವರ್ಣ, ದಿವಾಕರ್ ಎಂ, ಅಬ್ದುಲ್ ಮೊಯಿದ್ದೀನ್ ಕಾರ್ಕಳ, ಕೆ.ವಿ. ರಾಜಗೋಪಾಲ್ ಹಾಗೂ ಕಿರಣ್ ರಾಜ್ ಉಪಸ್ಥಿತರಿದ್ದರು.
ರಾಜಗೋಪಾಲ್ ಸ್ವಾಗತಿಸಿ, ಕಿರಣ್ ರಾಜ್ ವಂದಿಸಿದರು. ಮಾಧವ ಕಾರ್ಯಕ್ರಮ ನಿರೂಪಿಸಿದರು.
Share News