• Home  
  • ಜೆಡಿಎಸ್ ಜಿಲ್ಲಾ ಮಹಿಳಾ ಘಟಕದ ಸಭೆ ಸಂಘಟನೆ ಬಲವರ್ಧನೆಗೆ ಮಹಿಳಾ ಕಾರ್ಯಕರ್ತೆಯರ ಸಕ್ರಿಯ ಪಾತ್ರ ಅಗತ್ಯ
- LATEST NEWS

ಜೆಡಿಎಸ್ ಜಿಲ್ಲಾ ಮಹಿಳಾ ಘಟಕದ ಸಭೆ ಸಂಘಟನೆ ಬಲವರ್ಧನೆಗೆ ಮಹಿಳಾ ಕಾರ್ಯಕರ್ತೆಯರ ಸಕ್ರಿಯ ಪಾತ್ರ ಅಗತ್ಯ

ಮಂಗಳೂರು, ಜೂನ್ 16: ಜನತಾದಳ ಜಾತ್ಯಾತೀತ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕದ ಮಹತ್ವದ ಸಭೆಯು ಮಂಗಳವಾರ ನಗರದ ವುಡ್‌ಲ್ಯಾಂಡ್ಸ್ ಹೋಟೆಲ್‌ನಲ್ಲಿ ಯಶಸ್ವಿಯಾಗಿ ನಡೆಯಿತು. ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ರಮೀಝಾ ನಾಸೀರ್ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ಜರುಗಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಜಾಕೆ ಮಾಧವ ಗೌಡ ಅವರು, “ಪಕ್ಷದ ಬಲವರ್ಧನೆಯಲ್ಲಿ ಮಹಿಳಾ ಕಾರ್ಯಕರ್ತೆಯರ ಕೊಡುಗೆ ಅತ್ಯಂತ ಮಹತ್ವದ್ದಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮಹಿಳೆಯರು […]

Share News

ಮಂಗಳೂರು, ಜೂನ್ 16: ಜನತಾದಳ ಜಾತ್ಯಾತೀತ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕದ ಮಹತ್ವದ ಸಭೆಯು ಮಂಗಳವಾರ ನಗರದ ವುಡ್‌ಲ್ಯಾಂಡ್ಸ್ ಹೋಟೆಲ್‌ನಲ್ಲಿ ಯಶಸ್ವಿಯಾಗಿ ನಡೆಯಿತು. ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ರಮೀಝಾ ನಾಸೀರ್ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ಜರುಗಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಜಾಕೆ ಮಾಧವ ಗೌಡ ಅವರು, “ಪಕ್ಷದ ಬಲವರ್ಧನೆಯಲ್ಲಿ ಮಹಿಳಾ ಕಾರ್ಯಕರ್ತೆಯರ ಕೊಡುಗೆ ಅತ್ಯಂತ ಮಹತ್ವದ್ದಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮಹಿಳೆಯರು ಹೆಚ್ಚಿನ ಜವಾಬ್ದಾರಿ ವಹಿಸಬೇಕು. ಪಕ್ಷದ ತತ್ವ-ಸಿದ್ಧಾಂತಗಳನ್ನು ಜನರಿಗೆ ತಲುಪಿಸುವ ಕಾರ್ಯದಲ್ಲಿ ಮಹಿಳಾ ಘಟಕ ಮುಂಚೂಣಿಯಲ್ಲಿರಬೇಕು” ಎಂದು ಕರೆ ನೀಡಿದರು.

ಕಾರ್ಯಕ್ರಮದ ಆರಂಭದಲ್ಲಿ ಮಹಿಳಾ ಉಪಾದ್ಯಕ್ಷೆ ಶಾರದ ಶೆಟ್ಟಿ ಅತ್ತಾವರ ಪ್ರಾರ್ಥನೆ ಮಾಡಿದರು.ಜಿಲ್ಲಾ ಉಪಾದ್ಯಕ್ಷೆ ಚೂಡಮಣಿ ಯವರು ಸ್ವಾಗತ ಭಾಷಣ ಮಾಡಿದರು ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು ಅವರು ಪ್ರಸ್ತಾವಿಕ ಭಾಷಣ ಮಾಡಿ, ಪಕ್ಷದ ಸಂಘಟನಾ ಚಟುವಟಿಕೆಗಳು, ಮಹಿಳಾ ಘಟಕದ ಜವಾಬ್ದಾರಿಗಳು ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಕುರಿತು ವಿವರಿಸಿದರು. ಮಹಿಳಾ ಕಾರ್ಯಕರ್ತೆಯರು ಪಕ್ಷದ ತಳಮಟ್ಟದ ಸಂಘಟನೆಯಲ್ಲಿ ಇನ್ನಷ್ಟು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಅವರು ಕರೆ ನೀಡಿದರು

.ಸಭೆಯಲ್ಲಿ ಪಕ್ಷದ ಸಂಘಟನೆ ಬಲವರ್ಧನೆ, ಮಹಿಳಾ ಘಟಕದ ವಿಸ್ತರಣೆ, ಸದಸ್ಯತ್ವ ಅಭಿಯಾನ, ಮುಂಬರುವ ರಾಜಕೀಯ ಕಾರ್ಯಕ್ರಮಗಳ ರೂಪುರೇಷೆ ಹಾಗೂ ಪಕ್ಷದ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ಸೇರಿದಂತೆ ವಿವಿಧ ಮಹತ್ವದ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.

.ಸಭೆಯಲ್ಲಿ ಕಾರ್ಯಾಧ್ಯಕ್ಷರಾದ ಇಕ್ಬಲ್ ಮುಲ್ಕಿ ಹಾಗೂ ಶಶಿರಾಜ್ ಶೆಟ್ಟಿ ಕೊಳಂಬೆ, ಮೀನುಗಾರ ಘಟಕದ ರಾಜ್ಯಾಧ್ಯಕ್ಷ ರತ್ನಾಕರ್ ಸುವರ್ಣ, ಯುವ ಘಟಕದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ, ಮಹಿಳಾ ಘಟಕದ ಮುಖಂಡರಾದ ಅಮರ ಶ್ರೀ ಶೆಟ್ಟಿ ಹಾಗೂ ದಿವ್ಯ ಪ್ರಭಾ ಗೌಡ, ಮಾಜಿ ಕಾರ್ಪೊರೇಟರ್ ಅಜೀಜ್ ಕುದ್ರೋಳಿ, ಮಂಗಳೂರು ದಕ್ಷಿಣದ ಮಾಜಿ ಅಧ್ಯಕ್ಷ ಎನ್.ಪಿ. ಪುಷ್ಪರಾಜನ್, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಜೈನ್ ಸೇರಿದಂತೆ ಹಲವಾರು ಪ್ರಮುಖ ಮುಖಂಡರು ಉಪಸ್ಥಿತರಿದ್ದು ತಮ್ಮ ಸಲಹೆ-ಸೂಚನೆಗಳನ್ನು ಹಂಚಿಕೊಂಡರು.

ಸಭೆಯಲ್ಲಿ ಮಹಿಳಾ ಘಟಕವನ್ನು ಇನ್ನಷ್ಟು ವಿಸ್ತರಿಸುವುದು, ಹೊಸ ಸದಸ್ಯರ ಸೇರ್ಪಡೆಗೆ ವಿಶೇಷ ಅಭಿಯಾನ ಹಮ್ಮಿಕೊಳ್ಳುವುದು, ಬೂತ್ ಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸುವುದು ಹಾಗೂ ಮುಂಬರುವ ರಾಜಕೀಯ ಕಾರ್ಯಕ್ರಮಗಳಲ್ಲಿ ಮಹಿಳಾ ಕಾರ್ಯಕರ್ತೆಯರ ಸಕ್ರಿಯ ಭಾಗವಹಿಸುವಿಕೆಗೆ ಒತ್ತು ನೀಡುವ ಕುರಿತು ನಿರ್ಣಯ ಕೈಗೊಳ್ಳಲಾಯಿತು.

ಕೊನೆಯಲ್ಲಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ರಮೀಝಾ ನಾಸೀರ್ ಅವರು ಸಭೆಯಲ್ಲಿ ಭಾಗವಹಿಸಿದ ಎಲ್ಲ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತೆಯರ ಸಹಕಾರ ಕೋರಿದರು. ಮಹಿಳಾ ಘಟಕದ ಸಂಘಟನೆಯನ್ನು ಮತ್ತಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವಂತೆ ಕರೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಮಹಿಳಾ ಘಟಕದ ಪದಾಧಿಕಾರಿಗಳು, ವಿವಿಧ ಘಟಕಗಳ ಮುಖಂಡರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಕಾರ್ಯಕರ್ತೆಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Share News