• Home  
  • ಮಂಗಳೂರು- ನಾಳೆಯಿಂದ ಎ.9 ರವರೆಗೆ ಜೆಇಇ ಪರೀಕ್ಷೆ: ನಿಷೇಧಾಜ್ಞೆ ಜಾರಿ
- DAKSHINA KANNADA - HOME - LATEST NEWS

ಮಂಗಳೂರು- ನಾಳೆಯಿಂದ ಎ.9 ರವರೆಗೆ ಜೆಇಇ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಮಂಗಳೂರು: ಎಪ್ರಿಲ್ 2 ರಿಂದ 9 ರವರೆಗೆ ನಡೆಯಲಿರುವ ಜೆಇಇ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ 300 ಮೀಟರ್ ಸುತ್ತಮುತ್ತಲಿನ ನಗರ ಪೋಲಿಸ್ ಕಮಿಷನರೇಟ್ ವ್ಯಾಪ್ತಿಯ – ಪ್ರದೇಶವನ್ನು ನಿಷೆೀಧಿತ ಪ್ರದೇಶವೆಂದು ಘೋಷಿಸಿ ನಿಷೆೀಧಾಜ್ಞೆ ಜಾರಿಗೊಳಿಸಿ ಉಪ ಪೋಲಿಸ್ ಆಯುಕ್ತ ಸಿದ್ದಾರ್ಥ್‌ ಗೋಯಲ್ ಆದೇಶಿಸಿದ್ದಾರೆ.

1)ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್,

2) ಐಓಎನ್ ಡಿಜಿಟಲ್ ಝೋನ್,ಬೋಂದೆಲ್ ಎಮ್.ಎಸ್.ಎನ್.ಎಮ್ ಬೆಸೆಂಟ್ ವಿದ್ಯಾಕೇಂದ್ರ ಪ್ರದೇಶವನ್ನು ನಿಷೆೀಧಿತ ಪ್ರದೇಶವೆಂದು ಘೋಷಿಸಲಾಗಿದೆ.

ನಿಷೆೀಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು, ಯಾ ಇನ್ನಾವುದೇ ವಸ್ತುಗಳನ್ನು ಹಂಚುವುದು/ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣ ನಿಷೆೀಧಿಸಿದೆ.

ನಿಷೆೀಧಿತ ವಲಯದಲ್ಲಿ ಯಾವುದೇ ರೀತಿಯ ಕಾರಕ(ಅಸಿಡ್) ಸ್ಫೋಟಕ ವಸ್ತುಗಳನ್ನು ಕೊಂಡುಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೆೀಧಿಸಲಾಗಿದೆ.

ನಿಷೆೀಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೆೀಧಿಸಲಾಗಿದೆ.

ನಿಷೆೀಧಿತ ಪ್ರದೇಶದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಅಭ್ಯರ್ಥಿಗಳನ್ನು ಹೊರತುಪಡಿಸಿ ಸಾರ್ವಜನಿಕರು ಐದು ಅಥವಾ ಐದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು, ತಿರುಗಾಡುವುದನ್ನು ನಿಷೆೀಧಿಸಲಾಗಿದೆ.

ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 300 ಮೀಟರ್ ಪ್ರದೇಶದಲ್ಲಿ ಜೆರಾಕ್ಸ್ ಮತ್ತು ಕಂಪ್ಯೂಟರ್/ ಸೈಬರ್ ಅಂಗಡಿಗಳು/ ಪ್ರಿಂಟಿಂಗ್ ಶಾಪ್‍ಗಳು ಕಾರ್ಯ ನಿರ್ವಹಿಸುವುದನ್ನು ನಿಷೆೀಧಿಸಲಾಗಿದೆ.

ಪರೀಕ್ಷಾ ಕೇಂದ್ರದ ಆವರಣದಲ್ಲಿ ಮೊಬೈಲ್ ದೂರವಾಣಿ, ಬ್ಲೂ ಟೂತ್ ಹಾಗೂ ಪೇಜರ್ ಇತ್ಯಾದಿ ಎಲೆಕ್ಟ್ರಾನಿಕ್ಸ್ ಸಂರ‍್ಕ ಉಪಕರಣಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೆೀಧಿಸಲಾಗಿದೆ.

ಈ ನಿಷೇಧಾಜ್ಞೆ ಜಾರಿಯಲ್ಲಿರುವ ಪ್ರದೇಶದಲ್ಲಿ ಸರಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ ,ಸಭೆ ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ ,ಬ್ಯಾಂಕ್ ಭದ್ರತಾ ಸಿಬ್ಬಂದಿಗಳು ಕರ್ತವ್ಯ ನಿರ್ವಹಣೆ ವೇಳೆ ವೇಳೆಲಾಠಿ /ಶಸ್ತ್ರಾಸ್ತ್ರ ಉಪಯೋಗಿಸುವುದಕ್ಕೆ ಅನ್ವಯವಾಗುವುದಿಲ್ಲ ಎಂದು ಉಪ ಪೋಲಿಸ್ ಆಯುಕ್ತ ಹಾಗೂ ವಿಶೇಷ ಕಾರ್ಯ ನಿರ್ವಾಹಕ ದಂಡಾಧಿಕಾರಿ ಸಿದ್ದಾರ್ಥ್‌ ಗೋಯಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678