• Home  
  • ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ
- DAKSHINA KANNADA - HOME - LATEST NEWS

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

ಮಂಗಳೂರು, ನ.9;ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-28 ಸಾಲಿನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ ಹಾಗೂ ಪ್ರಧಾನ ಕಾರ್ಯದರ್ಶಿ ರಾಜೇಶ್ ಪೂಜಾರಿ ಮತ್ತು ಕೋಶಾಧಿಕಾರಿಯಾಗಿ ವಿಜಯ ಕೋಟ್ಯಾನ್ ಪಡು ಅವಿರೋಧ ವಾಗಿ ಆಯ್ಕೆ ಯಾಗಿದ್ದಾರೆ. ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ ಸಭಾಂಗ ಣದಲ್ಲಿ ಭಾನುವಾರ ನಡೆದ ಚುನಾವ ಣೆಯಲ್ಲಿ ಒಟ್ಟು 352 ,ಮಂದಿ ಮತದಾರರಲ್ಲಿ 331 ಮಂದಿ ಮತಚಲಾಯಿಸಿದ್ದರು‌. ಪುಷ್ಪರಾಜ್ 187 ಮತಗಳನ್ನು ಗಳಿಸಿದರೆ ಅವರ ಪ್ರತಿಸ್ಪರ್ಧಿ ಶ್ರವಣ್ ಕುಮಾರ್ […]

Share News

ಮಂಗಳೂರು, ನ.9;ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-28 ಸಾಲಿನ ಅಧ್ಯಕ್ಷರಾಗಿ
ಪುಷ್ಪರಾಜ್ ಬಿ.ಎನ್ ಆಯ್ಕೆ ಹಾಗೂ ಪ್ರಧಾನ ಕಾರ್ಯದರ್ಶಿ ರಾಜೇಶ್ ಪೂಜಾರಿ ಮತ್ತು ಕೋಶಾಧಿಕಾರಿಯಾಗಿ ವಿಜಯ ಕೋಟ್ಯಾನ್ ಪಡು ಅವಿರೋಧ ವಾಗಿ ಆಯ್ಕೆ ಯಾಗಿದ್ದಾರೆ.

ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ ಸಭಾಂಗ ಣದಲ್ಲಿ ಭಾನುವಾರ ನಡೆದ ಚುನಾವ ಣೆಯಲ್ಲಿ ಒಟ್ಟು 352 ,ಮಂದಿ ಮತದಾರರಲ್ಲಿ 331 ಮಂದಿ ಮತಚಲಾಯಿಸಿದ್ದರು‌. ಪುಷ್ಪರಾಜ್ 187 ಮತಗಳನ್ನು ಗಳಿಸಿದರೆ ಅವರ ಪ್ರತಿಸ್ಪರ್ಧಿ ಶ್ರವಣ್ ಕುಮಾರ್ ನಾಳ 144 ಮತಗಳನ್ನು ಪಡೆದರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಪ್ರತಿಸ್ಪರ್ಧಿ ಶ್ರವಣ ಕುಮಾರ್ ಪರಾಭವ ಗೊಂಡಿದ್ದಾರೆ.

ರಾಜ್ಯ ಕಾರ್ಯಕಾರಣಿ ಸಮಿತಿಯ ಸದಸ್ಯರಾಗಿ ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷ ಶ್ರೀನಿವಾಸ ನಾಯಕ್ ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಪೂಜಾರಿ ಮತ್ತು ಕೋಶಾಧಿಕಾರಿಯಾಗಿ ವಿಜಯ ಕೋಟ್ಯಾನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ವಿಲೈಡ್ ಡಿ ಸೋಜ,ಮುಹಮ್ಮದ್ ಆರೀಫ್, ಮತ್ತು ರಾಜೇಶ್ ಶೆಟ್ಟಿ, ಕಾರ್ಯದರ್ಶಿಗಳಾಗಿ ಸತೀಶ್ ಇರಾ, ಸಿದ್ದೀಕ್ ನೀರಾಜೆ, ಸುರೇಶ್ ಪಳ್ಳಿ ಗೆಲುವು ಸಾಧಿಸಿದ್ದಾರೆ. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಬೆಳ್ತಂಗಡಿಯ ಭುವನೇಶ್ವರ ಜಿ, ದಿವಾಕರ ಪದ್ಮುಂಜ, ಅಶೋಕ್ ಶೆಟ್ಟಿ ಬಿ.ಎನ್. ಸಂದೇಶ್ ಜಾರ, ಸಂದೀಪ್ ಕುಮಾರ್ ಎಂ. ಲಕ್ಷ್ಮೀನಾರಾಯಣ ರಾವ್, ಹರೀಶ್ ಮೋಟುಕಾನ, ನ್ಯೂಸ್ ಫಸ್ಟ್ ಮಂಗಳೂರು ಜಿಲ್ಲಾ ವರದಿಗಾರ ಕಿರಣ್ ಯು. ಸಿರ್ಸಿಕರ್, ಅಭಿಷೇಕ್ ಎಚ್.ಎಸ್., ಜಯಶ್ರೀ, ಸಂದೀಪ್ ವಾಗ್ಗೆ ಹರೀಶ್ ಕೆ.ಆದೂರ್, ಗಿರೀಶ್ ಅಡ್ಡಂಗಾಯ, ಸಂದೀಪ್ ಸಾಲ್ಯಾನ್, ಆರಿಫ್ ಕಲ್ಕಟ್ಟ ಆಯ್ಕೆಯಾಗಿದ್ದಾರೆ.

ದಕ್ಷಿಣ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಶಾ ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

Share News