canaratvnews

ಕದ್ರಿ ಶಿವಭಾಗ್: ತೋಮನಾಯ್ಗರ ರಸ್ತೆ ತಡೆಗೋಡೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರಿಂದ ಭೂಮಿ ಪೂಜೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 34ನೇ ಕದ್ರಿ ಶಿವಭಾಗ್ ವಾರ್ಡಿನ ತೋಮನಾಯ್ಗರ ರಸ್ತೆಯ ಬದಿಯಲ್ಲಿ ತಡೆಗೋಡೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಇತ್ತೀಚೆಗೆ ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಶಾಸಕರು, “ಮಳೆಗಾಲದಲ್ಲಿ ರಾಜಕಾಲುವೆಯಿಂದ ನೀರು ಉಕ್ಕಿ ಸ್ಥಳೀಯ ಮನೆಗಳಿಗೆ ನುಗ್ಗುತ್ತಿರುವ ಸಮಸ್ಯೆಯನ್ನು ಮನಗಂಡು, ಇಲ್ಲಿನ ನಿವಾಸಿಗಳು ತಡೆಗೋಡೆ ನಿರ್ಮಾಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಗತ್ಯ ಅನುದಾನ ಮೀಸಲಿರಿಸಿ ತಡೆಗೋಡೆ ನಿರ್ಮಿಸಲಾಗಿತ್ತು. ರಾಜ್ಯದ ಇತಿಹಾಸದಲ್ಲೇ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆ ಅಭಿವೃದ್ಧಿಗೆ ಮೊದಲ ಬಾರಿಗೆ ವಿಶೇಷ ಅನುದಾನ ನೀಡಿದ ಕೀರ್ತಿ ಬಿಜೆಪಿ ಸರ್ಕಾರಕ್ಕೆ ಸಲ್ಲುತ್ತದೆ. ತಡೆಹಿಡಿಯಲಾಗಿದ್ದ ಈ ಯೋಜನೆಯ ಮುಂದುವರಿದ ಕಾಮಗಾರಿಗೆ ಈಗ ಚಾಲನೆ ನೀಡಲಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಪೂರ್ಣಗೊಳ್ಳಲಿದೆ,” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಪಾಲಿಕೆ ಸದಸ್ಯೆ ಶ್ರೀಮತಿ ಕಾವ್ಯ ನಟರಾಜ್ ಆಳ್ವ, ಶಕ್ತಿಕೇಂದ್ರ ಪ್ರಮುಖ್ ವಿಕ್ರಂ ಚೌಟ, ಬೂತ್ ಅಧ್ಯಕ್ಷರಾದ ಶಿವರಾಮ್ ಭಂಡಾರಿ, ನವೀನ್ ಶೆಣೈ, ಯೋಗಿಶ್ ಶೆಣೈ, ನಟರಾಜ್ ಆಳ್ವ, ವನಿತಾ ರೈ, ರಂಜಿನಿ ರೈ ಹಾಗೂ ವಾರ್ಡಿನ ಪ್ರಮುಖರಾದ ಅಮಿತಾ ಶೆಟ್ಟಿ, ಅಶೋಕ್ ಶೆಟ್ಟಿ, ಮಮತಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Share News
Exit mobile version