• Home  
  • BJPಯಿಂದ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ಉಚ್ಛಾಟನೆ
- HOME - LATEST NEWS - STATE

BJPಯಿಂದ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ಉಚ್ಛಾಟನೆ

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​ ಕೊನೆಗೂ ಪಕ್ಷದಿಂದ ಉಚ್ಛಾಟಿಸಿದೆ. ಯತ್ನಾಳ್‌ ಅವರು ಉಚ್ಛಾಟನೆಯಾಗುತ್ತಿರುವುದು ಇದು ಎರಡನೇ ಬಾರಿ.

ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಬುಧವಾರ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣಬಡಿದಾಟಕ್ಕೆ ಕೊನೆಗೂ ಹೈಕಮಾಂಡ್​ ಬ್ರೇಕ್ ಹಾಕಿದೆ.

ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರವರಿ 10 ರಂದು ನೀಡಿದ್ದ ಶೋಕಾಸ್ ನೋಟಿಸ್‌ಗೆ ನಿಮ್ಮ ಪ್ರತಿಕ್ರಿಯೆಯನ್ನು ಪರಿಗಣಿಸಿದೆ ಮತ್ತು ಹಿಂದಿನ ಶೋಕಾಸ್ ನೋಟಿಸ್‌ಗಳಿಗೆ ಪ್ರತಿಕ್ರಿಯೆಯಾಗಿ ಉತ್ತಮ ನಡವಳಿಕೆಯ ಭರವಸೆಗಳನ್ನು ನೀಡಿದ್ದರೂ ಸಹ, ನೀವು ಪಕ್ಷದ ಶಿಸ್ತನ್ನು ಪದೇ ಪದೇ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದೆ.

ಆದ್ದರಿಂದ, ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಶಿಸ್ತು ಸಮಿತಿ ಆದೇಶದಲ್ಲಿ ತಿಳಿಸಲಾಗಿದೆ.

Share News

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678