canaratvnews

ನಂದಿನಿ ಹಾಲು ದರ ₹5 ಏರಿಕೆ : ಇಂದು ಮುಖ್ಯಮಂತ್ರಿಗಳಿಂದ ನಿರ್ಧಾರ

ಬೆಂಗಳೂರು: ನಂದಿನಿ ಹಾಲಿನ ಮಾರಾಟ ದರವನ್ನು ಲೀಟರ್‌ಗೆ 5 ರೂ. ಹೆಚ್ಚಳ ಮಾಡುವಂತೆ ರಾಜ್ಯ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳವು (ಕೆಎಂಎಫ್‌) ಸರಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದು, ಇಂದು ನಡೆಯುವ ಕ್ಯಾಬಿನೆಟ್‌ ಸಭೆಯಲ್ಲಿ  ಮುಖ್ಯಮಂತ್ರಿಗಳು ಹಾಲಿನ ಬೆಲೆ ಹೆಚ್ಚಳಕ್ಕೆ ಸಮ್ಮತಿಸುವ ಸಾಧ್ಯತೆಯಿದೆ.

ನಂದಿನಿ ಹಾಲಿನ ದರ ಏರಿಕೆ ಬಗ್ಗೆ ಇಂದು ಸರ್ಕಾರ ತೀರ್ಮಾನ ಕೈಗೊಳ್ಳಲಿದ್ದು, ಹಾಲಿನ ದರ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಾಗುವ ಸಾಧ್ಯತೆ ಇವೆ ಎನ್ನಲಾಗಿದೆ.

ಹೈನುಗಾರಿಕೆಯ ಖರ್ಚು ವೆಚ್ಚಗಳ ಹೆಚ್ಚಳದಿಂದಾಗಿ ಹಾಲಿನ ಬೆಲೆ ಏರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಹಾಲಿನ ದರ ಹೆಚ್ಚಿಸದಿದ್ದರೆ ಜಿಲ್ಲಾ ಹಾಲು ಒಕ್ಕೂಟಗಳು ನಷ್ಟ ಅನುಭವಿಸಬೇಕಾಗುತ್ತದೆ. ಮತ್ತೊಂದೆಡೆ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ. ಇತರೆ ಬ್ರ್ಯಾಂಡ್‌ಗಳ ಹಾಲಿನ ದರಕ್ಕೆ ಹೋಲಿಸಿದರೆ ರಾಜ್ಯದ ನಂದಿನಿ ಹಾಲಿನ ಬೆಲೆ ತುಂಬಾ ಕಡಿಮೆಯಿದೆ ಎಂದು ಪ್ರಸ್ತಾವದಲ್ಲಿ ಉಲ್ಲೇಸಲಾಗಿದೆ.

Share News
Exit mobile version