canaratvnews

Uber, Rapido ಸೇರಿದಂತೆ ಬೈಕ್‌ ಟ್ಯಾಕ್ಸಿ ಕಾರ್ಯಾಚರಣೆ ನಿಲ್ಲಿಸುವಂತೆ ಹೈಕೋರ್ಟ್‌ ಆದೇಶ

ಬೆಂಗಳೂರು: ಉಬರ್, ರ್ಯಾಪಿಡೋ ಸಹಿತ ಹಲವು ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ.

ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ನಿಯಮ ರೂಪಿಸಿಲ್ಲ. ನಿಯಮಗಳಿಲ್ಲದೇ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಮಾಡುವಂತಿಲ್ಲ. ಹೀಗಾಗಿ ಬೈಕ್ ಟ್ಯಾಕ್ಸಿ ಸ್ಥಗಿತಗೊಳಿಸುವಂತೆ ಓಲಾ, ಉಬರ್ ಮತ್ತು ರ್ಯಾಪಿಡೊಗಳಿಗೆ ಆರು ವಾರಗಳ ಕಾಲಾವಕಾಶ ನೀಡಿ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಹೈಕೋರ್ಟ್ ಪೀಠ ಆದೇಶಿಸಿದ್ದು, 3 ತಿಂಗಳಿನಲ್ಲಿ ನಿಯಮ ರೂಪಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.

ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು 2022 ರಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಇತರರು ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ ಎಂ ಶ್ಯಾಮ್ ಪ್ರಸಾದ್ ಅವರು ಇಂದು ಈ ಆದೇಶ ಹೊರಡಿಸಿದ್ದಾರೆ.

1988 ರ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 3 ರ ಅಡಿಯಲ್ಲಿ ಅಗತ್ಯ ನಿಯಮಗಳೊಂದಿಗೆ ಸಂಬಂಧಿತ ಮಾರ್ಗಸೂಚಿಗಳನ್ನು ತಿಳಿಸದ ಹೊರತು ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

Share News
Exit mobile version