Site icon canaratvnews

*ಫೆಬ್ರವರಿ 16 ರಿಂದ ಜಿಲ್ಲೆಗೆ ಮಾನವ ಹಕ್ಕುಗಳ ಆಯೋಗ ಭೇಟಿ*

ಮಂಗಳೂರು,ಫೆ.13 :ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿನ ನೊಂದವರಿಗೆ ಸೂಕ್ತ ನೆರವನ್ನು ಒದಗಿಸುವ ನಿಟ್ಟಿನಲ್ಲಿ 1993ರ ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮದ ಅಡಿಯಲ್ಲಿ ಸ್ಥಾಪಿತವಾಗಿರುವ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು ಫೆಬ್ರವರಿ 16 ರಿಂದ 20 ರವರೆಗೆ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಿಟ್ಟಿಂಗ್ಸ್ ನಡೆಸಲು ಉದ್ದೇಶಿಸಿರುತ್ತದೆ. ಈ ಸಂದರ್ಭದಲ್ಲಿ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಆಯೋಗದಲ್ಲಿ ನೋಂದಣಿಯಾಗಿರುವ ಪ್ರಕರಣಗಳನ್ನು ಇರ್ತಥ್ಯಪಡಿಸಿ, ವಿಲೇ ಮಾಡಿ ಕ್ರಮ ಜರುಗಿಸಲು ಉದ್ದೇಶಿಸಲಾಗಿದೆ.

ದೂರುದಾರರು ಹಾಗೂ ಪ್ರತಿವಾದಿ ಪ್ರಾಧಿಕಾರಿಗಳು ಈ ಸೌಲಭ್ಯದ ಸದುಪಯೋಗ ಪಡಿಸಿಕೊಳ್ಳಬಹುದು. ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗಳಲ್ಲಿನ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಿಗಧಿತ ದಿನಗಳಂದು ಸಾರ್ವಜನಿಕರಿಂದ ದೂರುಗಳು / ಅಹವಾಲುಗಳನ್ನು ಸಹ ಸ್ವೀಕರಿಸಲು ಉದ್ದೇಶಿಸಲಾಗಿದೆ. ಸಾರ್ವಜನಿಕರು ನಿಗಧಿತ ದಿನಾಂಕಗಳಂದು ಆಯೋಗದ ಅಧ್ಯಕ್ಷರನ್ನು (ಹಂಗಾಮಿ) ಹಾಗೂ ಸದಸ್ಯರನ್ನು ಸಂಪರ್ಕಿಸಿ, ದೂರುಗಳನ್ನು ಸಲ್ಲಿಸಬಹುದು.

ಫೆಬ್ರವರಿ 18 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಗೂ ಫೆಬ್ರವರಿ 19 ರಂದು ಉಡುಪಿ ಜಿಲ್ಲೆಯಲ್ಲಿ ಸಿಟ್ಟಿಂಗ್ಸ್ ನಡೆಸುವುದಾಗಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Share News
Exit mobile version