ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2025 ಹಾಗೂ 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಸಾಹಿತ್ಯ, ಜಾನಪದ ಹಾಗೂ ಸಿನಿಮಾ ಕ್ಷೇತ್ರಗಳ ಒಟ್ಟು ಆರು ಮಂದಿ ಹಿರಿಯ ಸಾಧಕರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ ಗಟ್ಟಿ ಕಾಪಿಕಾಡ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2025ನೇ ಸಾಲಿನ ಗೌರವ ಪ್ರಶಸ್ತಿ ಪುರಸ್ಕೃತರು:

ಪ್ರೊ. ಬಿ. ಶಿವರಾಮ ಶೆಟ್ಟಿ (ಸಾಹಿತ್ಯ / ಸಂಶೋಧನೆ)

ಕುಡ್ಡು ಕೊರಗ (ಜಾನಪದ)

ಶ್ರೀಮತಿ ಉಷಾ ಭಂಡಾರಿ, ಬೆಂಗಳೂರು (ನಾಟಕ / ಸಿನಿಮಾ)
2026ನೇ ಸಾಲಿನ ಗೌರವ ಪ್ರಶಸ್ತಿ ಪುರಸ್ಕೃತರು:

ಕೆ. ಪಿ. ರಾವ್ (ಸಾಹಿತ್ಯ / ಸಂಶೋಧನೆ)

ನೇಮು ಪರವ (ಜಾನಪದ)

ಸುಧಾಕರ ಬನ್ನಂಜೆ, ಬೆಂಗಳೂರು (ನಾಟಕ / ಸಿನಿಮಾ)
₹50,000 ನಗದು ಪುರಸ್ಕಾರ. ಪ್ರಶಸ್ತಿಯು ತಲಾ ಐವತ್ತು ಸಾವಿರ ರೂಪಾಯಿ ನಗದು ಬಹುಮಾನ ಹಾಗೂ ಅತ್ಯಾಕರ್ಷಕ ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ.
ಅಕ್ಟೋಬರ್ 4 ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ. ಪ್ರಶಸ್ತಿ ಪ್ರದಾನ ಸಮಾರಂಭವು ಮುಂಬರುವ ಅಕ್ಟೋಬರ್ 04 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಜರುಗಲಿದೆ ಎಂದು ಅಕಾಡೆಮಿ ಅಧ್ಯಕ್ಷರಾದ ತಾರಾನಾಥ ಗಟ್ಟಿ ಕಾಪಿಕಾಡ್ ತಿಳಿಸಿದ್ದಾರೆ.
