canaratvnews

ಮಂಗಳೂರಿಗೆ ಆಗಮಿಸಿದ ಕೇರಳ ಮುಖ್ಯಮಂತ್ರಿ ಶ್ರೀ ವಿ.ಡಿ. ಸತೀಶನ್ ಅವರಿಗೆ ಎಂ.ಎಲ್.ಸಿ ಶ್ರೀ ಐವನ್ ಡಿ’ಸೋಜಾ ಅವರಿಂದ ಆತ್ಮೀಯ ಸ್ವಾಗತ

ಮಂಗಳೂರು: ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ (MLC) ಶ್ರೀ ಐವನ್ ಡಿ’ಸೋಜಾ ಅವರು ಇಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೇರಳ ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ವಿ.ಡಿ. ಸತೀಶನ್ ಅವರನ್ನು ಭೇಟಿ ಮಾಡಿ, ಪುಷ್ಪಗುಚ್ಛ ನೀಡುವ ಮೂಲಕ ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡರು.

ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಸಂದರ್ಶನಕ್ಕಾಗಿ ಕೇರಳ ಮುಖ್ಯಮಂತ್ರಿಗಳು ಮಂಗಳೂರು ಮಾರ್ಗವಾಗಿ ಪ್ರಯಾಣಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಉಭಯ ನಾಯಕರು ಪರಸ್ಪರ ಸೌಹಾರ್ದಯುತವಾಗಿ ಮಾತುಕತೆ ನಡೆಸಿದರು ಮತ್ತು ಉಭಯ ರಾಜ್ಯಗಳ ಸಾಂಸ್ಕೃತಿಕ ಹಾಗೂ ಪ್ರಾದೇಶಿಕ ಬಾಂಧವ್ಯದ ಕುರಿತು ಹಂಚಿಕೊಂಡರು.

ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು.

Share News
Exit mobile version