Site icon canaratvnews

ಕೇರಳ ಚುನಾವಣೆ: ದಕ್ಷಿಣ ಕನ್ನಡದ ಗಡಿ ಪ್ರದೇಶದಲ್ಲಿ ಮದ್ಯ ಮಾರಾಟ ನಿಷೇಧ- ಜಿಲ್ಲಾಧಿಕಾರಿ

ಮಂಗಳೂರು: ಕೇರಳ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2026ರ ಸಂಬಂಧ ಮತದಾನದ ನಿಮಿತ್ತ ಎ.7 ಸಂಜೆ 5ಗಂಟೆಯಿಂದ ಎಪ್ರಿಲ್ 9 ರಂದು ಮಧ್ಯರಾತ್ರಿ 12 ಗಂಟೆಯ ತನಕ ಮತ್ತು ಮತ ಎಣಿಕೆಯ ನಿಮಿತ್ತ ಮೇ 3 ರ ಮಧ್ಯರಾತ್ರಿ 12 ಗಂಟೆಯಿಂದ ಮೇ 4ರ ಮಧ್ಯರಾತ್ರಿ 12 ಗಂಟೆಯ ತನಕ ‘‘ಒಣ ದಿನ’’ ಎಂದು ಘೋಷಿಸಿ ಈ ದಿನಗಳಲ್ಲಿ ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ಬಂಟ್ವಾಳ, ಪುತ್ತೂರು ಮತ್ತು ಸುಳ್ಯ ತಾಲೂಕುಗಳ ಗಡಿಭಾಗದ 5 ಕಿ.ಮೀ. ವ್ಯಾಪ್ತಿಯಲ್ಲಿರುವ ಮದ್ಯದಂಗಡಿ /ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಈ ದಿನಗಳಂದು ನಿಷೇಧಿಸಿರುವ ಪ್ರದೇಶಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶ ಹೊರಡಿಸಿದ್ದಾರೆ.

Share News
Exit mobile version