• Home  
  • *ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರ ಆರೋಗ್ಯ ವಿಚಾರಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ*
- DAKSHINA KANNADA - HOME

*ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರ ಆರೋಗ್ಯ ವಿಚಾರಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ*

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಇಲ್ಲಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಧಾನ ಪರಿಷತ್ ಸದಸ್ಯರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಮಂಜುನಾಥ ಭಂಡಾರಿ ಅವರನ್ನು ಇಂದು ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ತಮ್ಮ ಪತ್ನಿಯವರೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿದ ಶ್ರೀ ಖರ್ಗೆ ಅವರು, ಭಂಡಾರಿ ಅವರ ಆರೋಗ್ಯ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದರು. ಇದೇ ಸಂದರ್ಭದಲ್ಲಿ ಚಿಕಿತ್ಸೆ ನೀಡುತ್ತಿರುವ ಖ್ಯಾತ ಹೃದ್ರೋಗ ತಜ್ಞರಾದ ಡಾ. ದೇವಿಪ್ರಸಾದ್ ಶೆಟ್ಟಿ ಅವರೊಂದಿಗೆ […]

Share News

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಇಲ್ಲಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಧಾನ ಪರಿಷತ್ ಸದಸ್ಯರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಮಂಜುನಾಥ ಭಂಡಾರಿ ಅವರನ್ನು ಇಂದು ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ತಮ್ಮ ಪತ್ನಿಯವರೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿದ ಶ್ರೀ ಖರ್ಗೆ ಅವರು, ಭಂಡಾರಿ ಅವರ ಆರೋಗ್ಯ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದರು. ಇದೇ ಸಂದರ್ಭದಲ್ಲಿ ಚಿಕಿತ್ಸೆ ನೀಡುತ್ತಿರುವ ಖ್ಯಾತ ಹೃದ್ರೋಗ ತಜ್ಞರಾದ ಡಾ. ದೇವಿಪ್ರಸಾದ್ ಶೆಟ್ಟಿ ಅವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ ಅವರು, ಚಿಕಿತ್ಸೆಯ ವಿವರಗಳನ್ನು ಪಡೆದುಕೊಂಡರು.

ಬಳಿಕ ಮಂಜುನಾಥ ಭಂಡಾರಿ ಅವರೊಂದಿಗೆ ಮಾತನಾಡಿದ ಖರ್ಗೆ ಅವರು, “ಧೈರ್ಯವಾಗಿರಿ, ಶೀಘ್ರ ಗುಣಮುಖರಾಗಿ ಸಾರ್ವಜನಿಕ ಸೇವೆಗೆ ಮರಳಿ ಬನ್ನಿ” ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಂಜುನಾಥ ಭಂಡಾರಿ ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.
ಪ್ರಸ್ತುತ ಭಂಡಾರಿ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಗುಣಮುಖರಾಗುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

Share News