canaratvnews

ಕೆ.ಎಸ್.ಆರ್.ಟಿ.ಸಿ ವಿದ್ಯಾರ್ಥಿ ಬಸ್ ಪಾಸ್ ಪ್ರಸಕ್ತ ಸಾಲಿನ ಅರ್ಜಿ ಆಹ್ವಾನ

ಮಂಗಳೂರು, ಜೂನ್ 01 : 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಈಗಾಗಲೇ ಆರಂಭವಾಗಿವೆ. ಪ್ರಸಕ್ತ ಸಾಲಿನಲ್ಲಿ ಕೆ.ಎಸ್.ಆರ್.ಟಿ.ಸಿ (KSRTC) ನಿಗಮದ ವಿದ್ಯಾರ್ಥಿ ಬಸ್ ಪಾಸುಗಳನ್ನು ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರದ ಆದೇಶದಂತೆ ಕಳೆದ ವರ್ಷದ ಮಾದರಿಯಲ್ಲೇ ಈ ಬಾರಿಯೂ ಸಂಪೂರ್ಣ ಗಣಕೀಕೃತ (Computerized) ವ್ಯವಸ್ಥೆಯ ಮೂಲಕವೇ ವಿದ್ಯಾರ್ಥಿ ಬಸ್ ಪಾಸುಗಳನ್ನು ವಿತರಿಸಲಾಗುವುದು ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸುವ ವಿಧಾನ ಮತ್ತು ಪ್ರಮುಖ ಮಾರ್ಗಸೂಚಿಗಳು:
  • ಉಚಿತ ಆನ್‌ಲೈನ್ ಅರ್ಜಿ: ಅರ್ಹ ವಿದ್ಯಾರ್ಥಿಗಳು ಸೇವಾಸಿಂಧು ಅಧಿಕೃತ ಪೋರ್ಟಲ್ ಲಿಂಕ್ karnataka.gov.in ಮೂಲಕ ನೇರವಾಗಿ ಆನ್‌ಲೈನ್‌ನಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು.
  • ನಾಗರಿಕ ಸೇವಾ ಕೇಂದ್ರಗಳು:
    ಇಂಟರ್ನೆಟ್ ಸೌಲಭ್ಯವಿಲ್ಲದ ವಿದ್ಯಾರ್ಥಿಗಳು ಹತ್ತಿರದ ‘ಕರ್ನಾಟಕ-ಒನ್’ ಅಥವಾ ‘ಗ್ರಾಮ-ಒನ್’ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ನಿಯಮಾವಳಿಗಳನ್ವಯ ರೂ. 30 ಗಳ ಸೇವಾ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
  • ದೃಢೀಕರಣ ಪತ್ರ (Declaration Form):
    ವಿದ್ಯಾರ್ಥಿಗಳು ಬಸ್ ಪಾಸ್ ಅರ್ಜಿಗಾಗಿ ನಿಗದಿತ ಡಿಕ್ಲರೇಶನ್ ಫಾರ್ಮ್ ಅನ್ನು ಸೇವಾಸಿಂಧು ತಂತ್ರಾಂಶ ಅಥವಾ ಕೆ.ಎಸ್.ಆರ್.ಟಿ.ಸಿ ಅಧಿಕೃತ ವೆಬ್‌ಸೈಟ್ karnataka.gov.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.
  • ಸಹಿ ಮತ್ತು ಮೊಹರು ಕಡ್ಡಾಯ:
  • ಡೌನ್‌ಲೋಡ್ ಮಾಡಿದ ಫಾರ್ಮ್ ಅನ್ನು ಭರ್ತಿ ಮಾಡಿ, ತಮ್ಮ ಶಾಲಾ/ಕಾಲೇಜಿನ ಮುಖ್ಯೋಪಾಧ್ಯಾಯರು ಅಥವಾ ಪ್ರಾಂಶುಪಾಲರಿಂದ ಕಡ್ಡಾಯವಾಗಿ ಸಹಿ ಮತ್ತು ಶಾಲಾ ಮುದ್ರೆಯನ್ನು (Seal) ಪಡೆದು, ಅದನ್ನು ಅರ್ಜಿಯೊಂದಿಗೆ ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಬೇಕು. ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‌ನ ಹೆಸರು/ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್.ಎಂ.ಎಸ್ ಮುಖೇನ ಕಳುಹಿಸಲಾಗುತ್ತದೆ. ವಿದ್ಯಾರ್ಥಿ ಬಸ್ಸು ಪಾಸುಗಳನ್ನು ಜೂನ್ 1 ರಿಂದ ನಿಗದಿತ ಕೌಂಟರ್‌ಗಳಲ್ಲಿ ವಿತರಿಸಲಾಗುತ್ತದೆ. ತದನಂತರ ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್‌ಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು ಮುಖೇನ ಪಾವತಿಸಿ ಪಾಸನ್ನು ಪಡೆಯಬಹುದು. ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿರುತ್ತದೆ. ನೆರೆರಾಜ್ಯದಲ್ಲಿ ವಾಸವಿದ್ದು ಕರ್ನಾಟಕ ರಾಜ್ಯದ ಶಾಲೆ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಗಡಿಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು ವಿದ್ಯಾರ್ಥಿ ರಿಯಾಯಿತಿ ಬಸ್ಸು ಪಾಸು ಪಡೆಯುವ ಅಗತ್ಯವಿದೆ. ಮೇಲ್ಕಂಡ ಕ್ರಮಗಳನ್ನು ಅನುಸರಿಸಿ ಗಡಿಭಾಗದ ವಿದ್ಯಾರ್ಥಿಗಳು ಪಾಸುಗಳನ್ನು ಪಡೆಯಬಹುದು. ಕೆ.ಎಸ್.ಆರ್.ಟಿ.ಸಿ ನಿಗಮ ವ್ಯಾಪ್ತಿಯ ಪಾಸ್ ವಿತರಣಾ ಕೌಂಟರ್‌ಗಳ ವಿವರಗಳನ್ನು ನಿಗಮದ ವೆಬ್ ಸೈಟ್ https://ksrtc.karnataka.gov.in/studentpass ನಿಗಮದ ಒದಗಿಸಲಾಗಿದೆ ಎಂದು ನಲ್ಲಿ ಕೆ.ಎಸ್.ಆರ್.ಟಿ.ಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Share News
Exit mobile version