• Home  
  • ಕುಡ್ಲದ ಪಿಲಿಪರ್ಬ-2025ರ ಚಪ್ಪರ ಮುಹೂರ್ತ
- DAKSHINA KANNADA - HOME

ಕುಡ್ಲದ ಪಿಲಿಪರ್ಬ-2025ರ ಚಪ್ಪರ ಮುಹೂರ್ತ

ಮಂಗಳೂರು ಸೆ 22: ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಡೆಯಲಿರುವ ನಾಲ್ಕನೇ ವರ್ಷದ “ಕುಡ್ಲದ ಪಿಲಿ ಪರ್ಬ-2025” ದ ಚಪ್ಪರ ಮುಹೂರ್ತ ಕಾರ್ಯಕ್ರಮವು ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆಯಿತು.

ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು “ದಸರಾ ಸಂದರ್ಭದಲ್ಲಿ ಇಡೀ ತುಳುನಾಡಿನಲ್ಲೇ ಹುಲಿವೇಷದ ಸಂಭ್ರಮ ಮನೆ ಮಾಡಿರುತ್ತದೆ. ಇಂದು ಈ ನೆಲದ ಕಲೆ ತುಳುನಾಡು ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ ಜನಪ್ರಿಯತೆ ಪಡೆದುಕೊಂಡಿರುವುದು ಹೆಮ್ಮೆಯ ಸಂಗತಿ. ಈ ಜನಪ್ರಿಯತೆ ಜೊತೆಗೆ ಈ ಕಲೆಗೆ ಇನ್ನಷ್ಟು ಮೆರುಗು ನೀಡುವ ನಿಟ್ಟಿನಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಇದೇ ಸಪ್ಟೆಂಬರ್ 30 ರ ಮಂಗಳವಾರದಂದು ನಡೆಯಲಿರುವ ನಾಲ್ಕನೇ ವರ್ಷದ ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು ಮೆಲುಕು ಹಾಕುವ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನ ಪ್ರಯತ್ನವಾಗಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಎಲ್ಲಾ ಹುಲಿವೇಷ ತಂಡಗಳಿಗೂ ಶುಭಹಾರೈಕೆಗಳು. ಹುಲಿವೇಷ ತಂಡಗಳನ್ನು ಪ್ರೋತ್ಸಾಹಿಸಲು ಆಗಮಿಸಲಿರುವ ಸಾರ್ವಜನಿಕರೆಲ್ಲರಿಗೂ ಪ್ರೀತಿಯ ಸ್ವಾಗತ ಬಯಸುತ್ತಾ ಕಾರ್ಯಕ್ರಮವು ಅಭೂತಪೂರ್ವ ಯಶಸ್ಸು ಸಾಧಿಸಲಿ, ಎಂದು ಶುಭ ಹಾರೈಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ದಿವಾಕರ್ ಪಾಂಡೇಶ್ವರ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಪ್ರಮುಖರಾದ ನರೇಶ್ ಶೆಣೈ, ಅಶ್ವಿತ್ ಕೊಟ್ಟಾರಿ, ನರೇಶ್ ಪ್ರಭು, ಲಲಿತ್ ಮೆಂಡನ್, ಜಗದೀಶ್ ಕದ್ರಿ, ಬಿಜೆಪಿಯ ನಿಕಟಪೂರ್ವ ಪಾಲಿಕೆ ಸದಸ್ಯರುಗಳು, ಮುಖಂಡರುಗಳು ಉಪಸ್ಥಿತರಿದ್ದರು.

Share News

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678