canaratvnews

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕುದ್ಮುಲ್ ರಂಗರಾವ್ ಜಯಂತಿ: ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ

ಮಂಗಳೂರು: ಮಹಾನ್ ಸಮಾಜ ಸುಧಾರಕ ಪೂಜನೀಯ ಕುದ್ಮುಲ್ ರಂಗರಾವ್ ಅವರ ಜಯಂತಿಯ ಅಂಗವಾಗಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ (ಪರಿಶಿಷ್ಟ ಜಾತಿ ವಿಭಾಗ)ದ ವತಿಯಿಂದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ವಿಶೇಷ ಕಾರ್ಯಕ್ರಮ ಹಾಗೂ ಗಣ್ಯರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಆರ್. ಧರ್ಮಸೇನ್, “ಮಹಾತ್ಮ ಗಾಂಧೀಜಿಯವರೇ ತಮಗೆ ಗುರು ಎಂದು ಗೌರವಿಸಿದ ಕುದ್ಮುಲ್ ರಂಗರಾಯರು ತಳಸಮುದಾಯದ ಸಬಲೀಕರಣಕ್ಕೆ ಶ್ರಮಿಸಿದವರು. ಕಾಂಗ್ರೆಸ್ ಪಕ್ಷವು ಅವರ ಆದರ್ಶದ ಹಾದಿಯಲ್ಲೇ ಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿಯ 500 ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಹಾಗೂ ಅತಿ ಹೆಚ್ಚು ಅಂಕ ಗಳಿಸಿದ 30 ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗಿದೆ” ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಮಾತನಾಡಿ, “ಈ ಸಮಾರಂಭವು ಕೇವಲ ಜಯಂತಿ ಆಚರಣೆಯಾಗಿರದೆ ಶಿಕ್ಷಣ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣದ ಸಂಕಲ್ಪವನ್ನು ಬಲಪಡಿಸುವ ಜನಪರ ಅಭಿಯಾನವಾಗಿದೆ. ರಂಗರಾವ್ ಅವರ ಚಿಂತನೆಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಮಹತ್ವದ ವೇದಿಕೆ ಇದಾಗಿದೆ” ಎಂದು ತಿಳಿಸಿದರು.

ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್, ಮಾಜಿ ಸಚಿವ ಬಿ ರಮಾನಾಥ್ ರೈ ದ ಕ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷರಾದ ದಿನೇಶ್ ಮುಳೂರು ರವರು ಪ್ರಸ್ತವಿಕ ಬಾಷಣ ಮಾಡಿದರು, ವಿಧಾನ ಪರಿಷತ್ ಶಾಸಕರು ಐವನ್ ಡಿ ಸೋಜಾ, ಜಿ ಕೃಷ್ಣಪ್ಪ, ಏನ್ ಬಸವರಾಜ್, ಡಾ! ನಾಯಕ್ ರೂಪ್ ಸಿಂಗ್, ಕಾಣಿರಂ ರಾಠೋಡ್, ರಂಗನಾಥ್ ಪ್ರಸಾದ್, ಸಂತೋಷ್, ಸಾರಿಕಾ ಪೂಜಾರಿ, ಮಾಜಿ ಕಾರ್ಪರೇಟರ್ ನಾಗವೇಣಿ, ವಿಜಯಲಕ್ಷ್ಮಿ, ಸುಭಾಸ್ ಕೊಲ್ನಾಡ್, ಸೋಹನ್ ಆಳ್ವಾ, ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರು, ಮುಂಚೂಣಿ ಘಟಕಗಳ ಪದಾಧಿಕಾರಿಗಳು, ನಿಗಮ-ಮಂಡಳಿಗಳ ನಾಮನಿರ್ದೇಶಿತ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು, ಚುನಾವಣಾ ಅಭ್ಯರ್ಥಿಗಳು, ಪಕ್ಷದ ಕಾರ್ಯಕರ್ತರು, ವಿದ್ಯಾರ್ಥಿಗಳು ಭಾಗವಹಿಸಿದರು.

ಪ್ರೇಮ್ ಬಲ್ಲಾಳ್ ಭಾಗ್ ಸ್ವಾಗತಿಸಿದರು, ರೋಹಿತ್ ಉಳ್ಳಾಲ್ ಕಾರ್ಯ ನಿರೂಪಣೆಗೈದರು, ಗೌತಮ್ ಧನ್ಯವಾದ ಸಲ್ಲಿಸಿದರು,

Share News
Exit mobile version