• Home  
  • *ಕುಂಜತ್ತಬೈಲ್ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ವೀಕ್ಷಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ*
- DAKSHINA KANNADA

*ಕುಂಜತ್ತಬೈಲ್ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ವೀಕ್ಷಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ*

ಮಂಗಳೂರು: ಸುಮಾರು 800 ವರ್ಷಗಳ ಸುದೀರ್ಘ ಇತಿಹಾಸವಿರುವ ಕುಂಜತ್ತಬೈಲ್ ಕೊಂರ್ಗಿಬೈಲ್‌ನ ಅರ್ತಿವೊಡಲು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಎಪ್ರಿಲ್ 7 ರಿಂದ 12 ರವರೆಗೆ ಜರುಗಲಿರುವ ಪುನರ್ ಪ್ರತಿಷ್ಠಾಪನೆ ಹಾಗೂ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಿದ್ಧತೆಗಳನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭೇಟಿ ನೀಡಿ ವೀಕ್ಷಿಸಿದರು. ದೇವಸ್ಥಾನದಲ್ಲಿ ಪ್ರಸ್ತುತ ನಡೆಯುತ್ತಿರುವ ಜೀರ್ಣೋದ್ದಾರ ಕಾಮಗಾರಿಗಳು, ನೂತನವಾಗಿ ನಿರ್ಮಿಸಲಾಗುತ್ತಿರುವ ಭವ್ಯ ಸಭಾ ಭವನ ಹಾಗೂ ಅನ್ನ ಛತ್ರ ಸಂಕೀರ್ಣದ ಅಭಿವೃದ್ಧಿ ಕೆಲಸಗಳ ಬಗ್ಗೆ ಅವರು ಮಾಹಿತಿ […]

Share News

ಮಂಗಳೂರು: ಸುಮಾರು 800 ವರ್ಷಗಳ ಸುದೀರ್ಘ ಇತಿಹಾಸವಿರುವ ಕುಂಜತ್ತಬೈಲ್ ಕೊಂರ್ಗಿಬೈಲ್‌ನ ಅರ್ತಿವೊಡಲು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಎಪ್ರಿಲ್ 7 ರಿಂದ 12 ರವರೆಗೆ ಜರುಗಲಿರುವ ಪುನರ್ ಪ್ರತಿಷ್ಠಾಪನೆ ಹಾಗೂ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಿದ್ಧತೆಗಳನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭೇಟಿ ನೀಡಿ ವೀಕ್ಷಿಸಿದರು.

ದೇವಸ್ಥಾನದಲ್ಲಿ ಪ್ರಸ್ತುತ ನಡೆಯುತ್ತಿರುವ ಜೀರ್ಣೋದ್ದಾರ ಕಾಮಗಾರಿಗಳು, ನೂತನವಾಗಿ ನಿರ್ಮಿಸಲಾಗುತ್ತಿರುವ ಭವ್ಯ ಸಭಾ ಭವನ ಹಾಗೂ ಅನ್ನ ಛತ್ರ ಸಂಕೀರ್ಣದ ಅಭಿವೃದ್ಧಿ ಕೆಲಸಗಳ ಬಗ್ಗೆ ಅವರು ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ”ಐತಿಹಾಸಿಕ ಹಿನ್ನೆಲೆಯುಳ್ಳ ಈ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗುತ್ತಿರುವುದು ಸಂತಸದ ವಿಷಯ. ಈ ಪುಣ್ಯ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಿ ಬ್ರಹ್ಮಕಲಶೋತ್ಸವವನ್ನು ಯಶಸ್ವಿಗೊಳಿಸೋಣ,” ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ನರೇಶ್ ರೈ ದೆಪ್ಪುಣಿಗುತ್ತು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ವಿಠಲ್ ಆಳ್ವ, ಕೂಳೂರು ಬೀಡು ಅಶೀಶ್ ಬಳ್ಳಾಲ್, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮಹಾ ಪೌರರಾದ ಹರಿನಾಥ್, ಕರ್ನಾಟಕ ಆಹಾರ ಆಯೋಗದ ಸದಸ್ಯರಾದ ಸುಮಂತ್ ರಾವ್ ಉಪಸ್ಥಿತರಿದ್ದರು.

ಜೊತೆಗೆ ಮ.ನ.ಪಾ ಮಾಜಿ ಸದಸ್ಯರಾದ ಅನಿಲ್‌ ಕುಮಾ‌ರ್, ದೀಪಕ್ ಪೂಜಾರಿ, ಯುವ ಕಾಂಗ್ರೆಸ್ ಮುಖಂಡರಾದ ಗಿರೀಶ್ ಆಳ್ವ, ರೂಪೇಶ್ ರೈ, ರೆಹಮಾನ್ ಖಾನ್, ಕುಂಜತ್ತಬೈಲ್ ವಾರ್ಡ್ ಅಧ್ಯಕ್ಷ ಹುಸೈನ್ ರಿಯಾಝ್ ಹಾಗೂ ಪ್ರಮುಖರಾದ ನೇಮಿರಾಜ ಶೆಟ್ಟಿ ಪಕ್ಕಳ, ಶೇಖರ ಕೋಟ್ಯಾನ್, ದಯಾನಂದ ಶೆಟ್ಟಿ, ದಿನೇಶ್ ಕೊಂರ್ಗಿಬೈಲ್, ಇಬ್ರಾಹಿಂ ಅತ್ರಬೈಲ್, ಲತೀಫ್, ಅಶೋಕ್‌ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

Share News