canaratvnews

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ- ನಶಮುಕ್ತ ಭಾರತ ಅಭಿಯಾನ

ಸುಳ್ಯ:ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಕಾಲೇಜಿನ ಎನ್.ಎಸ್.ಎಸ್. ಘಟಕವು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕದ ಸಹಯೋಗದೊಂದಿಗೆ ನಶಮುಕ್ತ ಭಾರತ ಅಭಿಯಾನವನ್ನು ನಡೆಸಲಾಯಿತು.
ಈ ಕಾರ್ಯಕ್ರಮದ ಪ್ರಯುಕ್ತ ಜನಜಾಗೃತಿ ಜಾಥಾ ಮತ್ತು ಮಾನವ ಸರಪಳಿಯನ್ನು ಸುಳ್ಯ ನಗರದಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಂಗವಾಗಿ ನಶಮುಕ್ತ ಭಾರತದ ಸಾಮೂಹಿಕ ಪ್ರತಿಜ್ಞೆ ಯನ್ನು ತೆಗೆದುಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಶಲ್ಯ ತಂತ್ರ ವಿಭಾಗದ ಮುಖ್ಯಸ್ಥರಾದ ಡಾ. ಹರ್ಷವರ್ಧನ್ ಕೆ, ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸನತ್ ಕುಮಾರ್ ಡಿ ಜಿ, ಮತ್ತು ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ವಿನಯ ಶಂಕರ್ ಭಾರಧ್ವಾಜ್ ಬಿ,
ಎನ್. ಎಸ್. ಎಸ್. ಯೋಜನಾಧಿಕಾರಿ ಡಾ. ಪ್ರಮೋದ್ ಪಿ ಎ, ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರುಗಳು ಮತ್ತು ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share News
Exit mobile version