canaratvnews

ಬೆಳ್ತಂಗಡಿಯಲ್ಲಿ ಸಾಕು ನಾಯಿಯನ್ನು ಹೊತ್ತೊಯ್ದ ಚಿರತೆ: ಸಿಸಿಟಿವಿಯಲ್ಲಿ ಸೆರೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಾದ್ಯಂತ ಚಿರತೆಯ ಹಾವಳಿ ಹೆಚ್ಚಾಗುತ್ತಿದ್ದು, ಛಾವಣಿಯಲ್ಲಿ ಮಲಗಿದ್ದ ಸಾಕು ನಾಯಿಯನ್ನು ಹೊತ್ತೊಯ್ದ ಘಟನೆ ನಡೆದಿದೆ. ಇದರಿಂದ ತಾಲೂಕಿನಾದ್ಯಂತ ಜನರನ್ನು ಬೆಚ್ಚಿಬೀಳಿಸುವಂತಿದೆ. ಚಿರತೆ ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.

ಫೆ.5 ರ ಮಧ್ಯರಾತ್ರಿ  ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ದಿಡುಪೆ ಕುಂಡಾಲ್ ಮನೆ ಜಯಂತ್ ಎಂಬವರ ಮನೆಯ ಹೊರಛಾವಣಿಯಲ್ಲಿದ್ದ ಸಾಕು ನಾಯಿಯನ್ನು ಹೊತ್ತೊಯ್ದ ಘಟನೆ ನಡೆದಿದೆ. ನಾಯಿಯನ್ನು ಹೊತ್ತೊಯ್ದ ದೃಶ್ಯವು ಅವರ ಮನೆಯ ಸಿಸಿ ಟಿವಿಯಲ್ಲಿಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿದೆ.

ಘಟನೆ ಬಗ್ಗೆ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದು ಶೀಘ್ರದಲ್ಲೇ ಕಾಡುಪ್ರಾಣಿಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು  ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ.

 

 

Share News
Exit mobile version