canaratvnews

ಅಡುಗೆ ಅನಿಲದ ದರ ಏರಿಸಿದ ಕೇಂದ್ರ: 50 ರೂ. ಹೆಚ್ಚಳ

ಮಂಗಳೂರು: ದಿನನಿತ್ಯದ ವಸ್ತುಗಳ ದರ ಹೆಚ್ಚಳದ ನಡುವೆಯೇ ಅಡುಗೆ ಅನಿಲದ ದರವನ್ನು 50 ರೂಪಾಯಿಗೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಆದೇಶಿಸಿದೆ. ಇಂದಿನಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.

ಇದು ಸಾಮಾನ್ಯ ಸಿಲಿಂಡರ್ ಜತೆ ಉಜ್ವಲಾ ಯೋಜನೆಗೂ ಅನ್ವಯವಾಗಲಿದೆ. ಬಗ್ಗೆ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಮಾಹಿತಿ ನೀಡಿದ್ದಾರೆ. ಅಡುಗೆ ಅನಿಲದ ದರವನ್ನು ಉಜ್ವಲಾ ಯೋಜನೆ ಮತ್ತು ಸಾಮಾನ್ಯ ವರ್ಗದ ಗ್ರಾಹಕರಿಗೆ ಹೆಚ್ಚಿಸಲಾಗಿದೆ. ಹೊಸ ದರದ ಅನ್ವಯ 14.2 ಕೇಜಿ ಅಡುಗೆ ಅನಿಲದ ದರ 803 ರೂಪಾಯಿಯಿಂದ 853ಕ್ಕೆ ಏರಿಕೆಯಾಗಿದೆ. ಉಜ್ವಲಾ ಯೋಜನೆಯ ಫಲಾನುಭವಿಗಳಿಗೆ 503 ರಿಂದ 553ಗೆ ಏರಿಕೆ ಮಾಡಲಾಗಿದೆ ಎಂದಿದ್ದಾರೆ.

Share News
Exit mobile version