DAKSHINA KANNADAHOMELATEST NEWS

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು

ಬೆಳ್ತಂಗಡಿ: ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಜಾರಿಯಾಗಿದ್ದ ಜಾಮೀನು ರಹಿತ ವಾರೆಂಟ್ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಬಂಟ್ವಾಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ದ್ವೇಷ ಭಾಷಣ ಮಾಡಿದ ಆರೋಪದಡಿ ಬೆಳ್ತಂಗಡಿ ಪೊಲೀಸರು ದಾಖಲಿಸಿದ್ದ ಪ್ರಕರಣದಲ್ಲಿ, ಮಹೇಶ್ ಶೆಟ್ಟಿ ತಿಮರೋಡಿ ಅವರು ನ್ಯಾಯಾಲಯಕ್ಕೆ ಹಾಜರಾಗದೇ ಇದ್ದ ಹಿನ್ನೆಲೆಯಲ್ಲಿ ಬೆಳ್ತಂಗಡಿ ನ್ಯಾಯಾಲಯ ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು.

ಈ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಬಂಟ್ವಾಳ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ. ಈ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ಪರವಾಗಿ ನ್ಯಾಯವಾದಿ ಸಿರಾಜುದ್ದೀನ್ ಜೋಗಿಬೆಟ್ಟು ವಾದ ಮಂಡಿಸಿದ್ದರು.

Share News