canaratvnews

ಮಲ್ಲಿಕಟ್ಟೆ ಜಿಲ್ಲಾ ಕಾಂಗ್ರೇಸ್ ಕಚೇರಿ ಸಭಾಂಗಣದಲ್ಲಿ ಆಟಿದ ಕೂಟ ಕಾರ್ಯಕ್ರಮ

ಮಂಗಳೂರು ಆಗಸ್ಟ್ 08: ಮಂಗಳೂರು ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೇಸ್ ವತಿಯಿಂದ ಆಟಿದ ಕೂಟ ಕಾರ್ಯಕ್ರಮ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೇಸ್ ಕಚೇರಿ ಸಭಾಂಗಣದಲ್ಲಿ ಗುರುವಾರ ನೆರವೇರಿತು.

ಕಾರ್ಯಕ್ರಮದ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ತುಳುನಾಡಿನ ಸಂಸ್ಕೃತಿಯನ್ನು ಬೆಳೆಸುವ ಕಾರ್ಯ ಆಗಬೇಕು. ತುಳುನಾಡಿನ ಪರಂಪರೆಯನ್ನು ಮುಂದಿನ ಜನಾಂಗಕ್ಕೆ ಪರಿಚಯಿಸುವ ಕಾರ್ಯ ಅಗತ್ಯವಾಗಿ ನಡೆಯಬೇಕು. ಎಲ್ಲಾ ಜಾತಿ, ಧರ್ಮದವರೂ ಒಟ್ಟಾಗಿ ಇರಬೇಕೆನ್ನುವುದೇ ಆಟಿದ ಕೂಟದ ಉದ್ದೇಶ. ಇಂತಹ ಕಾರ್ಯಕ್ರಮ ಮುಂದಿನ ದಿನಗಳಲ್ಲಿ ಇನ್ನಷ್ಟು ನಡೆಯಲಿ ಎಂದರು.


ಈ ವೇಳೆ ಮಂಗಳೂರಿನ‌ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ರೆಮೋನಾ ಇವೆಟ್ಟ ಪಿರೇರಾ, ಜಿಲ್ಲಾ ನಗರ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆ ಅಪ್ಪಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಶಾಲೆಟ್ ಪಿಂಟೊ, ಕೆಪಿಸಿಸಿ ಮಹಿಳಾ ಪ್ರಧಾನ ಕಾರ್ಯದರ್ಶಿ ನಮಿತಾ ಡಿ ರಾವ್, ಕಾರ್ಯದರ್ಶಿ ನೀತು ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್.ಆರ್ ಪೂಜಾರಿ, ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಸಲೀಂ, ಮಾಜಿ ಕಾರ್ಪೊರೇಟರ್ ಪ್ರವೀಣ್ ಚಂದ್ರ ಆಳ್ವ, ನಗರ ಬ್ಲಾಕ್ ಮಹಿಳಾಧ್ಯಕ್ಷೆ ರೂಪಾ ಚೇತನ್, ತುಳು ವಿದ್ಯಾರ್ಥಿ ಮಮತಾ ನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು.

ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಚಂದ್ರಕಲಾ ಜೋಗಿ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಸುರೇಶ್ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಕಾಂಗ್ರೆಸ್ ಸದಸ್ಯರಾದ ಗೀತಾ ಅತ್ತಾವರ, ಲವೀನಾ, ವಿದ್ಯಾ ಅತ್ತಾವರ ಸಹಕರಿಸಿದರು.

Share News
Exit mobile version