canaratvnews

*ಅಮೃತ ಪ್ರಕಾಶ 116ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ*

ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ಹಾಗೂ ಬಲ್ಮಠ ಕಾಲೇಜ್ ಸಹಯೋಗದಲ್ಲಿ 116ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಸರಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜ್ ಬಲ್ಮಠ ನಡೆಯಿತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ವನಿತಾ ದೇವಾಡಿಗ ವಹಿಸಿದರು. ಮುಖ್ಯ ಸಂಪನ್ಮೂಲ ಅತಿಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಬಿ.ಎನ್. ಹಾಗೂ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಕೃಷ್ಣಮೂರ್ತಿ ಹಾಗೂ ಕರಾವಳಿ ಲೇಖಕಿಯರ ವಾಚಕಿಯರ ಸಂಘದ ಅಧ್ಯಕ್ಷರಾದ ಶ್ರೀಮತಿ ಶಕುಂತಳ ಶೆಟ್ಟಿ ಉಪಸ್ಥಿತರಿದ್ದರು . ನಿವೃತ್ತ ಶಿಕ್ಷಕಿ ಲೇಖಕಿ ಸುಧಾನಾಗೇಶ್ ಕಾರ್ಯಕ್ರಮ ನಿರೂಪಿಸಿದರು ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಸ್ವಾಗತಿಸಿದರು. ಕನ್ನಡ ಉಪನ್ಯಾಸಕಿ ಯಶೋಧರವರು ವಂದಿಸಿದರು.

Share News
Exit mobile version