canaratvnews

*ಡಾ. ಮಾಲತಿ ಶೆಟ್ಟಿ ಮಾಣೂರು ಅವರಿಗೆ ಸ್ವಾಮಿ ವಿವೇಕಾನಂದ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿ ಪ್ರದಾನ*

ಮಂಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಸನ ಹಾಗೂ ನಾಟ್ಯಮಯೂರಿ ನೃತ್ಯ ಟ್ರಸ್ಟ್‌ ರಿಜಿಸ್ಟ್ರಾ‌ರ್ ವಿರಾಜಪೇಟೆ ಕೊಡಗು ಜಂಟಿ ಆಶ್ರಯದಲ್ಲಿ ಜನವರಿ 18ರಂದು ಯುವಶಕ್ತಿಯ ಸಕಾರ ಮೂರ್ತಿ ಸ್ವಾಮಿ ವಿವೇಕಾನಂದ ಜಯಂತಿ ಉತ್ಸವ ಪ್ರಯುಕ್ತ ನಡೆದ ಸ್ವಾಮಿ ವಿವೇಕಾನಂದ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿಯನ್ನು ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಹಾಸನದ ಡಾ. ಬಿ.ಆರ್ ಅಂಬೇಡ್ಕ‌ರ್ ಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು

ಚೆನ್ನಬಸವೇಶ್ವರ ಕ್ಷೇತ್ರದ ಮಲ್ಲಿಕಾರ್ಜುನ ಸ್ವಾಮೀಜಿ ಅರಕಲಗೂಡು ವಿಧಾನಸಭಾ ಮಾಜಿ ಶಾಸಕ ಎ ಮಂಜು, ಕನ್ನಡ ಸಾಹಿತ್ಯ ಪರಿಷತ್‌ ಹಾಸನ ಗೌರವ ಕಾರ್ಯದರ್ಶಿ ಬೊಮ್ಮೇ ಗೌಡ, ಉದ್ಯಮಿ ಸಮಾಜಸೇವಕ ಸಾಧಿಕ್ ಅಹಮದ್ ಉಡುಪಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಧಾಕರ್ ಎಸ್, ಕಾರ್ಕಳದ ಉದ್ಯಮಿ ಶಕೀ‌ರ್ ಅಹಮದ್‌, ಕರ್ನಾಟಕ ರಾಜ್ಯಪೌರ ನೌಕರರ ಸಂಘದ ಚಿತ್ರದುರ್ಗ ರಾಜ್ಯ ಕಾರ್ಯದರ್ಶಿ ಸುರೇಶ್‌ ಜಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕರಾದ ಆಶಾ ಆರ್, ಅತಿಥಿಗಳಾಗಿ ಉಪಸ್ಥಿತರಿದ್ದರು. ನಾಟ್ಯಮಯೂರಿ ನೃತ್ಯ ಸಂಸ್ಥೆಯ ರೂವಾರಿ ಪ್ರೇಮಾಂಜಲಿ ಆಚಾರ್ಯ ಸ್ವಾಗತಿಸಿ, ಕಾರ್ಯದರ್ಶಿ ದೀಪಕ್ ವಂದಿಸಿದರು ವೆಂಕಟೇಶ್ ಆರ್ ಕಾರ್ಯಕ್ರಮ ನಿರೂಪಿಸಿದರು.

ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಅವರು ಕಳೆದ 21 ವರುಷಗಳಿಂದ ಸಾಹಿತ್ಯ ಪತ್ರಿಕೋದ್ಯಮದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದಾರೆ. ಕಳೆದ 13 ವರುಷಗಳಿಂದ ಸಾಹಿತ್ಯ ಪರ ಅಮೃತ ಪ್ರಕಾಶ ಪತ್ರಿಕೆಯನ್ನು ನಡೆಸುತ್ತಿದ್ದಾರೆ 9 ಕೃತಿಗಳನ್ನು ಪ್ರಕಟಿಸಿದ್ದಾರೆ. ಇತರ ಹಿರಿಯ ಕಿರಿಯ ಲೇಖಕರ ಸರಣಿ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ 49 ಕೃತಿಯನ್ನು ಪತ್ರಿಕೆಯ ವತಿಯಿಂದ ಬಿಡುಗಡೆಗೊಳಿಸಿದ್ದಾರೆ .ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳಲ್ಲಿ ಸಾಹಿತ್ಯದ ಅಭಿರುಚಿ ಮೂಡಿಸುವ ಸಲುವಾಗಿ ಈಗಾಗಲೇ 117 ಶಾಲಾ-ಕಾಲೇಜುಗಳಲ್ಲಿ ಉಚಿತ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಮಾಡಿ ದಾಖಲೆ ನಿರ್ಮಿಸಿದ್ದಾರೆ. ಮಂಗಳೂರಿನ ಅತ್ತಾವರದಲ್ಲಿ ಪತಿ ಸತ್ಯ ಪ್ರಕಾಶ್ ಶೆಟ್ಟಿ ಜೊತೆ ಸಾಹಿತ್ಯ ನಂದನದಲ್ಲಿ ವಾಸವಾಗಿದ್ದಾರೆ. ಇವರ ತಂದೆ ಹಿರಿಯ ಯಕ್ಷಗಾನ ಕಲಾವಿದರಾದ ದಿವಂಗತ ಕಿಟ್ಟಣ್ಣ ಶೆಟ್ಟಿ ಮಾಣೂರು ಹಾಗೂ ರೇವತಿ ಶೆಟ್ಟಿ ಮಾಣೂರು ದಂಪತಿಗಳ ಸುಪುತ್ರಿ

Share News
Exit mobile version