ಮಂಗಳೂರು, ಮಾ.24 : ದೇವರ ದಾಸಿಮಯ್ಯ ಅವರು ವಚನ ಸಾಹಿತ್ಯದ ಮೂಲಕ ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಸರ್ಕಾರವು ಮಹನೀಯರ ಜಯಂತಿಗಳನ್ನು ಆಚರಿಸುತ್ತಿದ್ದು, ಈ ಬಗ್ಗೆ ಯುವಜನರು ಜಯಂತಿಯ ಸಂದೇಶಗಳನ್ನು ತಿಳಿದುಕೊಳ್ಳಬೇಕು. ಯುವಜನತೆ ಜಯಂತಿ ಆಚರಣೆ ವಿಚಾರಗಳನ್ನು ತಿಳಿದುಕೊಳ್ಳುವ ಜೊತೆಗೆ ಮಹಾನ್ ವ್ಯಕ್ತಿಗಳ ವಿಚಾರಧಾರೆಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದರು.

ಉಡುಪಿ ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ.ಪ್ರಜ್ಞಾ ಮಾರ್ಪಳ್ಳಿ ಉಪನ್ಯಾಸ ನೀಡಿ ಮಾತನಾಡಿ, ವೃತ್ತಿಯಲ್ಲಿ ನೇಕಾರರಾಗಿದ್ದ ದೇವರ ದಾಸಿಮಯ್ಯ ಅವರ ಸಾಹಿತ್ಯ ಸೃಷ್ಟಿ ಮತ್ತು ಬದುಕು ಬಹಳ ಮಹತ್ತರ. ಅತ್ಯಂತ ಸರಳವಾದ ಭಾμÉಯಲ್ಲಿ ಕ್ಲಿಷ್ಟವಾದ ಸಂಗತಿಗಳನ್ನು ಮನಮುಟ್ಟುವ ಹಾಗೆ ವಚನಗಳ ಮೂಲಕ ಸಾರಿದವರಲ್ಲಿ ದೇವರ ದಾಸಿಮಯ್ಯ ಕೂಡ ಒಬ್ಬರು. ಭಕ್ತಿ ಮತ್ತು ಸಾಮಾಜಿಕ ವಿಚಾರಗಳನ್ನು ಸರಳವಾಗಿ ವಚನಗಳಲ್ಲಿ ಮೂಡಿಸಿದ್ದಾರೆ.
ದೇವಾಂಗ ಸಮಾಜದ ಶರವಣ ಮತ್ತು ತ್ಯಾಗರಾಜ್, ಸಂಸ್ಥೆಯ ಕನ್ನಡ ವಿಭಾಗದ ಮುಖ್ಯಸ್ಥೆ ಲಕ್ಷ್ಮೀದೇವಿ ಎಲ್ ಮತ್ತಿತರರು ಉಪಸ್ಥಿತರಿದ್ದರು.
ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲ ಡಾ.ಗಣಪತಿ ಗೌಡ ಎಸ್ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಮತ್ತು ಸಂಸ್ಕøತ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ ಸ್ವಾಗತಿಸಿ, ಸಂಸ್ಥೆಯ ಕನ್ನಡ ಪ್ರಾಧ್ಯಾಪಕ ಡಾ. ಮಾಧವ್ ವಂದಿಸಿದರು. ವಿದ್ಯಾರ್ಥಿ ಪೂರ್ಣಿಮಾ ನಿರೂಪಿಸಿದರು.