LATEST NEWS

ಸಿದ್ಧಕಟ್ಟೆ ಮಂಚಕಲ್ಲು ಗೆಳೆಯರ ಬಳಗದ 9ನೇ ವರ್ಷದ ಮೊಸರು ಕುಡಿಗೆ ಉತ್ಸವ:

ಬಂಟ್ವಾಳ: ಸಿದ್ಧಕಟ್ಟೆ ಮಂಚಕಲ್ಲು ಗೆಳೆಯರ ಬಳಗದ ವತಿಯಿಂದ 9ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಆಯೋಜಿಸಲಾಗಿದ್ದ ಭಕ್ತಿಭಾವಪೂರ್ಣ ಮೊಸರು ಕುಡಿಗೆ ಉತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಶ್ರೀ ಬಿ. ರಮಾನಾಥ ರೈ ಅವರು ಭಾಗವಹಿಸಿ ಶುಭ ಹಾರೈಸಿದರು.

ನಮ್ಮ ಸಾಂಸ್ಕೃತಿಕ ಪರಂಪರೆ, ಧಾರ್ಮಿಕ ಆಚರಣೆ ಹಾಗೂ ಸಮಾಜದ ಸೌಹಾರ್ದತೆಯನ್ನು ಪ್ರತಿಬಿಂಬಿಸುವ ಈ ಕಾರ್ಯಕ್ರಮದಲ್ಲಿ ಯುವಕರು, ಗ್ರಾಮಸ್ಥರು ಮತ್ತು ಭಕ್ತಾದಿಗಳು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡು ಶ್ರೀಕೃಷ್ಣ ಜನ್ಮೋತ್ಸವವನ್ನು ಸಡಗರ-ಸಂಭ್ರಮದಿಂದ ಆಚರಿಸಿದರು. ಯುವಕರ ತಂಡಗಳು ಸಾರ್ವಜನಿಕರ ಹರ್ಷೋದ್ಗಾರಗಳ ಮಧ್ಯೆ ಮೊಸರು ಕುಡಿಕೆ ಒಡೆಯುವ ಮೂಲಕ ಗಮನ ಸೆಳೆದವು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಬಿ. ರಮಾನಾಥ ರೈ ಅವರು, “ಇಂತಹ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾಜದಲ್ಲಿ ಏಕತೆ, ಸಹಬಾಳ್ವೆ ಮತ್ತು ನಮ್ಮ ಸಂಸ್ಕೃತಿಯ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವಲ್ಲಿ ಮಹತ್ವದ ಪಾತ್ರವಹಿಸುತ್ತವೆ. ಗ್ರಾಮೀಣ ಭಾಗದಲ್ಲಿ ಇಂತಹ ಸೌಹಾರ್ದಯುತ ಉತ್ಸವಗಳು ನಿರಂತರವಾಗಿ ನಡೆಯಬೇಕು” ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮಂಚಕಲ್ಲು ಗೆಳೆಯರ ಬಳಗದ ಪದಾಧಿಕಾರಿಗಳು, ಸ್ಥಳೀಯ ಪ್ರಮುಖರು, ಮುಖಂಡರು ಹಾಗೂ ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.

Share News