DAKSHINA KANNADALATEST NEWS

ಹಿರಿಯ ಪತ್ರಕರ್ತರಾದ ರಾಮಚಂದ್ರ ರಾವ್, ಜೆ.ಕೆ.ರೈ ನಿಧನ: ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ನುಡಿನಮನ

ಮಂಗಳೂರು, ನ.6: ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತರಾದ ರಾಮಚಂದ್ರ ರಾವ್ ಹಾಗೂ ಸುಳ್ಯದ ಜೆ.ಕೆ. ರೈ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರ ವತಿಯಿಂದ ಭಾವಪೂರ್ಣ ನುಡಿನಮನ ಸಲ್ಲಿಸಲಾಯಿತು.

ನಗರದ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘ (ರಿ), ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾಭವನ ಟ್ರಸ್ಟ್‌ನ ಜಂಟಿ ಆಶ್ರಯದಲ್ಲಿ ಸಂತಾಪ ಸೂಚಕ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಅಗಲಿದ ಹಿರಿಯ ಚೇತನಗಳ ಪತ್ರಿಕೋದ್ಯಮದ ಸೇವೆ ಮತ್ತು ಸಮಾಜಮುಖಿ ಕಾರ್ಯಗಳನ್ನು ಸ್ಮರಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು ಹಾಗೂ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಉಪಸ್ಥಿತರಿದ್ದರು.

ಸಭೆಯಲ್ಲಿ ಸುಳ್ಯ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ, ಹಿರಿಯ ಪತ್ರಕರ್ತರಾದ ಭಾಸ್ಕರ ರೈ ಕಟ್ಟ, ಗುರುರಾಜ್ ಪಣಿಯಾಡಿ, ಜಿಲ್ಲಾ ಸಂಘದ ಕೋಶಾಧಿಕಾರಿ ವಿಜಯ ಕೋಟ್ಯಾನ್, ಕಾರ್ಯದರ್ಶಿ ಸುರೇಶ್ ಡಿ. ಪಳ್ಳಿ, ಪ್ರಮುಖರಾದ ಸತೀಶ್ ಇರಾ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾದ ಅಶೋಕ್ ಶೆಟ್ಟಿ ಬಿ.ಎನ್., ಕಿರಣ್ ಸಿರ್ಸಿಕರ್, ಗಿರೀಶ್ ಅಡ್ಪಂಗಾಯ, ಹರೀಶ್ ಮೋಟುಕಾನ ಸೇರಿದಂತೆ ಹಲವು ಪತ್ರಕರ್ತರು ಭಾಗವಹಿಸಿ ಮೃತರ ಆತ್ಮಕ್ಕೆ ಶಾಂತಿ ಕೋರಿದರು.

Share News