LATEST NEWS

ಸಮಾನತೆ ಸಂವಿಧಾನದ ಮೂಲ ಆಶಯ _ಶಾಸಕ ಅಶೋಕ್ ಕುಮಾರ್ ರೈ

ಮಂಗಳೂರು: ಸಮಾನತೆಯು ಭಾರತೀಯ ಸಂವಿಧಾನದ ಮೂಲ ಆಶಯವಾಗಿದೆ. ಪ್ರಜೆಗಳಿಗೆ ಮೂಲಭೂತ ಹಕ್ಕು ಮತ್ತು ಸ್ವಾತಂತ್ರ್ಯ ಕಲ್ಪಿಸಿರುವ ಸಂವಿಧಾನದ ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ನಗರದ ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಅಳವಡಿಸಲಾದ ‘ಭಾರತ ಸಂವಿಧಾನದ ಪೀಠಿಕೆ’ ಫಲಕವನ್ನು ಶುಕ್ರವಾರ ಅನಾವರಣಗೊಳಿಸಿ ಅವರು ಮಾತನಾಡಿದರು.”ಪತ್ರಿಕಾ ರಂಗವನ್ನು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವೆಂದು ಪರಿಗಣಿಸಲಾಗಿದೆ. ಅಂತಹ ಜವಾಬ್ದಾರಿಯುತ ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಸಂವಿಧಾನದ ಪೀಠಿಕೆ ಫಲಕ ಅಳವಡಿಸಿರುವುದು ಒಂದು ಅತ್ಯಂತ ಮಾದರಿ ಮತ್ತು ಶ್ಲಾಘನೀಯ ಕಾರ್ಯವಾಗಿದೆ” ಎಂದು ಅವರು ಅಭಿಪ್ರಾಯಪಟ್ಟರು.

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್.ಬಿ.ಎನ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ಉಪಾಧ್ಯಕ್ಷ ವಿಲ್ಫ್ರೆ ಡ್ ಡಿಸೋಜಾ, ಕೋಶಾಧಿಕಾರಿ ವಿಜಯ ಕೋಟ್ಯಾನ್, ಕಾರ್ಯಕಾರಿ ಸಮಿತಿ ಸದಸ್ಯ ಸಂದೀಪ್ ಕುಮಾರ್.ಎಂ., ಹಿರಿಯ ಪತ್ರಕರ್ತ ಭಾಸ್ಕರ ರೈ ಕಟ್ಟ ಉಪಸ್ಥಿತರಿದ್ದರು.

Share News