LATEST NEWS

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ

ಪುತ್ತೂರು: ಸೆ.18 ರಂದು ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿರುವ ಕರ್ನಾಟಕ ಸರಕಾರದ ಸಚಿವ ಸಂಪುಟ ಸಭೆಯ ಬಗ್ಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಜೊತೆಗೆ ಪುತ್ತೂರು ಶಾಸಕ ಅಶೋಕ್ ರೈ ಬುಧವಾರ ಮಾತುಕತೆ ನಡೆಸಿದ್ದಾರೆ.


ಸಿ ಎಂ ಅವರನ್ನು ಭೇಟಿಯಾದ ಶಾಸಕರು ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ರಜ್ಯದ ಎರಡನೇ ಅಧಿಕೃತ ಭಾಷೆಯ ಅನುಮೋದನೆಯ ಜೊತೆಗೆ ಪುತ್ತೂರಿನ ಬೇಡಿಕೆಗಳ ಪಟ್ಟಿಯನ್ನು ಕೂಡಾ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದಾರೆ.


ಪುತ್ತೂರಿನ ಸರಕಾರಿ ಮೆಡಿಕಲ್ ಕಾಲೇಜು ಸಭೆಯಲ್ಲಿ ಅನುಮೋದನೆಯಾಗಲಿದೆ ಇದರ ಜೊತೆಗೆ ಪುತ್ತೂರು ವಿಧಾನಸಬಾ ಕ್ಷೇತ್ರದ ಅಭಿವೃದ್ದಿಗೆ ಶಾಸಕರು ಹತ್ತು ಹಲವು ಯೋಜನೆಗಳನ್ನು ರೂಪಿಸಿದ್ದಾರೆ. ಈ ಯೋಜನೆಗಳ ವಿಚಾರವನ್ನು ಸಿ ಎಂ ಜೊತೆ ತಿಳಿಸಿದ್ದಾರೆ. ಮೊಟ್ಟ ಮೊದಲ ಬಾರಿಗೆ ಕರಾವಳಿ ಜಿಲ್ಲೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಪುತ್ತೂರು ಸೇರಿದಂತೆ ಜಿಲ್ಲೆಯ ಪ್ರಮುಖ ಬೇಡಿಕೆಗಳಿಗೆ ಅನುಮೋದನೆ ದೊರೆಯಲಿದ್ದು ಪುತ್ತೂರಿನಲ್ಲಿ ಆಗಬೇಕಾಗಿದ್ದ ಅಭಿವೃದ್ದಿ ಕಾರ್ಯಗಳ ಬಗ್ಗೆ ಸಿ ಎಂ ಅವರಿಗೆ ನೀಡಿದ ಮನವಿಯಲ್ಲಿ ತಿಳಿಸಲಾಗಿದೆ.

Share News